ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು ಇಂದು ಬೆಳಗಾವಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಡಿಸಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ವಿರೋಧಿಸಿ ಧರಣಿಗೆ ಮುಂದಾಗಿದ್ದ ರೈತ ಮುಖಂಡರು ಮಾನ್ಯ ಅಮಿತ್ ಶಾಗೆ ಸ್ವಾಗತ ರೈತರ ಬಳಿ ಬಂದು ಕಾನುನು ತಿಳಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ರೈತರ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತ ಹೋರಾಟಗಾರರ ಮಧ್ಯ ತೀವ್ರ ವಾಗ್ವಾದ ನಡೆದಿದೆ. ಬಾಯಿ ಬಾಯಿ ಬಡಿದುಕೊಂಡು ರೈತರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.