ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಶನಿವಾರ ಭೇಟಿ ನೀಡಲಿದ್ದಾರೆ. ಅಷ್ಟರೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಕೇಂದ್ರ ಗೃಹ ಸಚಿವ ಹಾಗೂ ಪಕ್ಷದ ಹಿರಿಯ ಮುಖಂಡ ಅಮಿತ್ ಷಾ ಬಂದು ಹೋದ ನಂತರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಬೇಕೆಂದು ಈ ಮೊದಲು ತೀರ್ಮಾನಿಸಲಾಗಿತ್ತು. ಆದರೆ ಅವರು ಆಗಮಿಸುವ ಮುನ್ನವೇ ಸಚಿವರಿಗೆ ಜವಾಬ್ದಾರಿ ನೀಡಲು ಯೋಚಿಸಲಾಗಿದೆ ಎಂದು ತಿಳಿಸಿದರು.
ಅಮಿತ್ ಷಾ ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೊದಲು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಆರ್ಎಎಫ್ಗೆ ಶಂಕುಸ್ಥಾಪನೆ ನೆರವೇರಿಸುವರು, ನಂತರ ವಿಧಾನಸೌಧದಲ್ಲಿ ಪೆÇಲೀಸ್ ತರಬೇತಿ ಅಕಾಡೆಮಿ ಉದ್ಘಾಟನೆ ಬಳಿಕ ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.