Belagavi

ಇತ್ತಿಚೆಗೆ ಅಗಲಿದ ಗಣ್ಯರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಕಾರ್ಯಕ್ರಮ

Share

ಇತ್ತೀಚಿಗೆ ನಿಧನರಾದ ಕನ್ನಡ ಕಟ್ಟಾಳು, ಹೋರಾಟಗಾರ ಹಾಗೂ ಪತ್ರಕರ್ತ ರಾಘವೇಂದ್ರ ಜೋಶಿ, ಮರಾಠಿ ಪತ್ರಕರ್ತ ಅಶೋಕ ಯಾಳಗಿ ಹಾಗೂ ಬಿಜೆಪಿ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸೋಮವಾರ ಬೆಳಗಾವಿ ಪತ್ರಕರ್ತರ ಸಂಘ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಆರಂಭದಲ್ಲಿ ಇತ್ತಿಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ರಾಘವೇಂದ್ರ ಜೋಷಿ, ಅಶೋಕ ಯಾಳಗಿ, ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಕೋರಲಾಯಿತು.

ನಂತರ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ಪತ್ರಕರ್ತರು ಸಮಾಜದ ಆಗು ಹೋಗುಗಳ ಬಗ್ಗೆ ನಿರ್ಭೀತಿಯಿಂದ ಬೆಳಕು ಚೆಲ್ಲಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಉತ್ತಮ ಹೆಸರು ಪಡೆದುಕೊಳ್ಳಲು ಸಾಧ್ಯ. ಕನ್ನಡ ಭಾμÉಯ ಪತ್ರಕರ್ತ ರಾಘವೇಂದ್ರ ಜೋಶಿ ಹಾಗೂ ಮರಾಠಿ ಪತ್ರಕರ್ತ ಅಶೋಕ ಯಾಳಗಿ ಅವರನ್ನು ಹತ್ತಿರದಿಂದ ನೋಡಿಲ್ಲ. ಆದರೆ ಅವರ ನಿರ್ಭಿತಿಯಿಂದ ಮಾಡುವ ವರದಿಗಾರಿಕೆ ಬಗ್ಗೆ ಕೇಳಿದ್ದೇನೆ. ರಾಜ್ಯದಲ್ಲಿಯೇ ಬೆಳಗಾವಿಯಲ್ಲಿ ಮಾಧ್ಯಮ ಕ್ಷೇತ್ರ ಹೊಸ ದಿಕ್ಸೂಚಿಯನ್ನು ಬರೆದಿದೆ. ಇಲ್ಲಿನ ಪತ್ರಿಕೆಗಳು ಸದಾಕಾಲವೂ ನಾಡು, ನುಡಿಗಾಗಿ ಸದಾಕಾಲವೂ ಧ್ವನಿ ಎತ್ತುತ್ತಲಿವೆ ಎಂದರು. ರಾಘವೇಂದ್ರ ಜೋಶಿ ಹಾಗೂ ಅಶೋಕ ಯಾಳಗಿ ಅವರ ನಿಧನದಿಂದ ಬೆಳಗಾವಿ ಮಾಧ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ, ಕಾರ್ಯಾಧ್ಯಕ್ಷ ಕುಂತಿನಾಥ ಕಲಮನಿ, ಉಪಾಧ್ಯಕ್ಷ ಮಹೇಶ ವಿಜಾಪೂರ, ಕಾರ್ಯದರ್ಶಿ ಸುರೇಶ ನೇರ್ಲಿ, ಜಂಟಿ ಕಾರ್ಯದರ್ಶಿಗಳಾದ ಜಗದೀಶ ವಿರಕ್ತಮಠ, ಸುನೀಲ ಪಾಟೀಲ, ಖಜಾಂಚಿ ಮಂಜುನಾಥ ಕೋಳಿಗುಡ್ಡ, ಸದಸ್ಯರಾದ ಕೀರ್ತಿ ಕಾಸರಗೂಡ, ರಾಜಶೇಖರಯ್ಯಾ ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Tags:

error: Content is protected !!