Belagavi

ಈಟ್ ರೈಟ್ ಜಾಗೃತಿ ಅಭಿಯಾನ: ಆಹಾರ ಮಾರಾಟಕ್ಕೆ ನೋಂದಣಿ, ಲೈಸನ್ಸ್ ಇನ್ನು ಕಡ್ಡಾಯ

Share

ಈಟ್ ರೈಟ್ ಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳು, ಅಂಕಿ ಸಂಖ್ಯಾ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಆಹಾರ ಸುರಕ್ಷತೆ ಮುಂಜಾಗ್ರತೆ ಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಲಹಾ ಸಮಿತಿಯೊಂದನ್ನು ರಚಿಸಲಾಯಿತು.

: ಆಹಾರ ಸುರಕ್ಷತೆಗೆ ಸಂಬಂಧಿಸಿ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲ ಜಿಲ್ಲೆಗಳಲ್ಲಿ ಈಟ್ ರೈಟ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆಹಾರ ಸುರಕ್ಷತೆ ಬಗ್ಗೆ ಅರಿವು ಮೂಡಿಸಿ ಸುರಕ್ಷಿತ, ಅಪಾಯಕಾರಿಯಲ್ಲದ ಆಹಾರ ಮಾರಾಟಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಅಭಿಯಾನಕ್ಕೆ ಅಧಿಕಾರಿಗಳನ್ನು ತಯಾರಿ ಬಗ್ಗೆ ಸಮಾಲೋಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳು, ಅಂಕಿ ಸಂಖ್ಯೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಾತನಾಡಿ, ಈಟ್ ರೈಟ್ ಅಭಿಯಾನ ಜನರ ಸುರಕ್ಷತೆಯ ಸಲುವಾಗಿ ಇರುವುದು. ಸರಿಯಾದ ಆಹಾರವನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಇರುವ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಬೇಕು. ಆಹಾರ ತಯಾರಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಂಡಿರಬೇಕು ಮತ್ತು ಲೈಸೆನ್ಸ್ ಹೊಂದಿರಬೇಕು. ಆಹಾರ ತಯಾರಿಸಿದ ದಿನ, ಎಲ್ಲಿಯವರೆಗೆ ಆಹಾರ ಇಡಬಹುದು ಎಂದು ಹೇಳುವ ಎಕ್ಸಪೈರಿ ದಿನ ಕಡ್ಡಾಯವಾಗಿ ನಮೂದಿಸಬೇಕು. ಈ ಕುರಿತು ಜಾಗೃತಿ ಮೂಡಿಸಲು ಅಧಿಕಾರಿಗಳು ಈಟ್ ರೈಟ್ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಈ ವೇಳೆ ಅಂಕಿ ಸಂಖ್ಯೆ ಇಲಾಖೆ ಅಧಿಕಾರಿ ಡಾ.ರಾಜೇಂದ್ರ ಭಾಲ್ಕಿ ಮಾತನಾಡಿ, ಕಾನೂನು ಅರಿವಿಲ್ಲದೇ ಆಹಾರ ಮಾರಾಟ ಅಡೆತಡೆಯಿಲ್ಲದೇ ನಡೆದಿದೆ. ಆಹಾರ ಸುರಕ್ಷತೆ ದೃಷ್ಟಿಯಿಂದ ಎಫ್‍ಎಸ್‍ಎಸ್‍ಐ ಕಾಯ್ದೆ ಅನುಷ್ಠಾನಗೊಳಿಸುವುದು ನಮ್ಮ ಆದ್ಯತೆಯಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಈಟ್ ರೈಟ್ ಅಭಿಯಾನ ನಡೆಸಲಾಗುತ್ತಿದ್ದು, ಜನರಲ್ಲಿ ತಿಳಿವಳಿಕೆ ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಸಭೆ ಹಮ್ಮಿಕೊಳ್ಳಲಾಗಿತ್ತು ಎಂದರು.

ಒಟ್ಟಿನಲ್ಲಿ ಈಟ್ ರೈಟ್ ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಆಹಾರ ಸುರಕ್ಷತೆಯ ಮಹತ್ವದ ಬಗ್ಗೆ ತಿಳಿವಳಿಕೆ ಮೂಡಿಸಲಾಯಿತು.

Tags:

error: Content is protected !!