ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ಸಭೆ ಬೆಳಗಾವಿ ಶಿವಬಸವನಗರದ ಲಿಂಗಾಯತ ಭವನದಲ್ಲಿ ನಡೆಯಿತು. ಸಮಾಜದ ಸಂಘಟನೆ, ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಬೆಳಗಾವಿ ಶಿವಬಸವ ನಗರದ ಲಿಂಗಾಯತ ಭವವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ವೀರಶೈವ ಮಹಾಸಭಾ ಯುವ ಘಟಕದ ಸಭೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ರಾಷ್ಟಿçÃಯ ಅಧ್ಯಕ್ಷ ಮಹಾಂತೇಶ ಪಾಟೀಲ ಹಾಗೂ ಗಣ್ಯರು ಉದ್ಘಾಟಿಸಿದರು.
ಈ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ರಾಜ್ಯಾಧ್ಯಕ್ಷ ಮಹಾಂತೇಶ ಪಾಟೀಲ ಮಾತನಾಡಿ, ರಾಷ್ಟçದಲ್ಲಿ ೪ ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮಾಜ ಕರ್ನಾಟಕದಲ್ಲೇ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಈ ಸಲ ೪೦ ಪ್ರತಿಭಾವಂತರು ಐಎಎಸ್ ಪಾಸಾಗಿದ್ದಾರೆ. ಅದರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಬೆರಳೆಣಿಕೆಯಷ್ಟಿದ್ದಾರೆ. ರಾಜಕೀಯವಾಗಿ ನಾವೆಷ್ಟೇ ಪ್ರಭಾವಶಾಲಿಗಳೆಂದು ಹೇಳಿಕೊಂಡರೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ದೃಷ್ಟಿಯಿಂದ ಹಿಂದುಳಿದ ಜನರು ವೀರಶೈವ ಲಿಂಗಾಯತರಲ್ಲಿದ್ದಾರೆ. ಸಮಾಜದ ಹೆಚ್ಚು ಹೆಚ್ಚು ಜನರು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗೆ ಹೋಗಬೇಕು. ಇದಕ್ಕಾಗಿ ಸಮಾಜದಲ್ಲಿ ಪ್ರೋತ್ಸಾಹ ನೀಡುವ ಕೆಲಸಗಳು ಆಗಬೇಕು ಎಂದರು.
ನಂತರ ನಡೆದ ಚರ್ಚೆಯಲ್ಲಿ ಸಮಾಜದ ಗಣ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ವೀರಶೈವ ಲಿಂಗಾಯತ ಸಮಾಜದ ಯುವಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಸ್ಥಾಪಿಸಬೇಕು. ಯುವಕರ ಸಂಘಟನೆಗೆ ಆದ್ಯತೆ ನೀಡಬೇಕು, ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳಿಗೆ ಹಾಜರಾಗುವ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸೂಕ್ತ ತರಬೇತಿ ನೀಡುವ ವ್ಯವಸ್ಥೆ ಆಗಬೇಕು. ಲಿಂಗಾಯತ ಸಮಾಜವು ಧಾರ್ಮಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ಯೋಜನೆಗಳನ್ನು ರೂಪಿಸಬೇಕು. ಮಹಾಸಭೆಯ ಸದಸ್ವತ್ವ ಅಭಿಯಾನಕ್ಕೆ ಚಾಲನೆ ನೀಡಬೇಕು. ಧಾರವಾಡದಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ರಾಷ್ಟಿçÃಯ ಯುವ ವಿಭಾಗದ ಸಭೆಯಲ್ಲಿ ಸಮಾಜದ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ಚರ್ಚೆಯಾಗಬೇಕು, ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ವೀರಶೈವ ಲಿಂಗಾಯತ ಸಮಾಜವನ್ನು ಸೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸುವ ಕುರಿತಂತೆ ಇನ್ನಷ್ಟು ವಿಸ್ತೃತ ಚರ್ಚೆಯಾಗಬೇಕು ಎಂದು ಸಭೆಯಲ್ಲಿ ಅಭಿಪ್ರಾಯಗಳು ಕೇಳಿ ಬಂದವು.
ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಕ್ಕ ಬೆಲ್ಲದ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಚಿನ್ ಹಿರೇಮಠ ಸ್ವಾಗತಿಸಿದರು. ಸವಿತಾ ತಿಗಡಿ ಪ್ರಾರ್ಥನೆ ಹಾಡಿದರು. ಚೇತನ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು.