Davanagere

ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಸಿಎಂ..ಡಿಸಿಎಂ ಗೋವಿಂದ ಕಾರಜೋಳ

Share

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಸರ್ಕಾರ ನಡೆಯಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಜ್ಯದ ಉಸ್ತುವಾರಿ ಅರುಣ್‍ಸಿಂಗ್ ಅವರೇ ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರ ನಾಯಕತ್ವ ಮೆಚ್ಚಿಕೊಂಡಿದ್ದಾರೆ. ಹಾಗಾಗಿ ನಾಯಕತ್ವದ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಇನ್ನು ಕಳೆದ ಸಾಲಿನ ಜುಲೈನಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೆಲ ದಿನಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ, ಆ ನಂತರ ಕೊರೊನಾ ಬಾಧಿಸಿತು.2020 ಸಂಪೂರ್ಣ ಸಂಕಷ್ಟ ವರ್ಷದ ನಡುವೆಯೂ ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈಗ ಆರ್ಥಿಕತೆಗೆ ಅನುಗುಣವಾಗಿ ಅಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಶಾಸಕರ ಕ್ಷೇತ್ರಕ್ಕೆ ಕಾಮಗಾರಿಗಳಿಗೆ 25 ಕೋಟಿ ಆನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಒಟ್ಟಾರೆ ಸಿಎಂ ಯಡಿಯೂರಪ್ಪ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಕೂಡ ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!