State

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

Share

ದೇಶದಲ್ಲಿ ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭಿಸುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸೋಮವಾರ ಚರ್ಚೆ ನಡೆಸುವರು. ಸಂಜೆ 4 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ.

ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಎಲ್ಲಾ ರಾಜ್ಯಗಳ ಮುಖ್ಯಮುಂತ್ರಿಗಳೊಂದಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ.

ಮೊದಲು 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ಹಾಕಲಾಗುವುದು. ಆ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Tags:

error: Content is protected !!