Uncategorized

ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯ ವೃತ್ತಿಪರ ನೇಕಾರರಿಗೂ ಕೊಡುವಂತೆ ಆಗ್ರಹಿಸಿ ಧರಣಿ

Share

 

 

ವೃತ್ತಿಪರ ನೇಕಾರರನ್ನು ಕಾರ್ಮಿಕರೆಂದು ಪರಿಗಣಿಸಿ ಕಟ್ಟಡ ಕಾರ್ಮಿಕರಿಗಿರುವ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ವತಿಯಿಂದ ಚಿಕ್ಕೋಡಿ ತಾಲೂಕಿನ ಗಡಿ ಗ್ರಾಮ ಮಾಣಕಾಪುರ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ವೃತ್ತಿಪರ ನೇಕಾರರನ್ನು ಕಾರ್ಮಿಕರು ಎಂದು ಪರಿಗಣಿಸಿ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳನ್ನು ನೇಕಾರರಿಗೂ ನೀಡುವಂತೆ ಆಗ್ರಹಿಸಿ ಮಂಗಳವಾರ ಮಾಣಕಾಪುರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಪದಾಧಿಕಾರಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ವೃತ್ತಿಪರ ನೇಕಾರರನ್ನು ಕಾರ್ಮಿಕರೆಂದು ಪರಿಗಣಿಸಿ ಕಟ್ಟಡ ಕಾರ್ಮಿಕರಿಗಿರುವ ಸೌಲಭ್ಯಗಳನ್ನು ಒದಗಿಸಬೇಕು. ನೇಕಾರ ಸಮ್ಮಾನ ಯೋಜನೆಗೆ ವಿದ್ಯುತ ಚಾಲಿತ ಮಗ್ಗಗಳ ಕೂಲಿ ಕಾರ್ಮಿಕ ನೇಕಾರರನ್ನು ಒಳಪಡಿಸಿ ವಾರ್ಷಿಕ ಕನಿಷ್ಠ 10 ಸಾವಿರ ರೂಪಾಯಿಗಳನ್ನು ಜಾರಿ ಮಾಡಬೇಕು. 55 ವರ್ಷದ ನೇಕಾರರಿಗೆ 5 ಸಾವಿರ ರೂಪಾಯಿ ಮಾಸಾಶನ ಜಾರಿ ಮಾಡಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ ವೃತ್ತಿಪರ ನೇಕಾರ ಕಾರ್ಮಿಕರ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅದೇ ರೀತಿ ಹಿಂದಿನ ತಿಂಗಳು ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಆದ್ರೆ ಇದುವರೆಗೂ ನಮ್ಮ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ. ತುರ್ತಾಗಿ ನಮ್ಮ ಬೇಡಿಕೆ ಈಡೇರಿಸದೇ ಹೋದ್ರೆ ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಪದಾಧಿಕಾರಿಗಳಾದ ರಮೇಶ ಭಾಕರೆ, ಡಾ.ಅನಿಲ ಕಾಂಬಳೆ, ಸುನೀಲ ಮೇಟಿ ಸೇರಿದಂತೆ ಹಲವು ನೇಕಾರರು ಭಾಗಿಯಾಗಿದ್ದರು.

Tags:

error: Content is protected !!