ಕಬ್ಬಿನ ಹೊಲದಲ್ಲಿ ಬೆಂಕಿ ಅವಘಡ ಸಂಭವಿಸಿ ದ ಪರಿಣಾಮವಾಗಿ ಟ್ರ್ಯಾಕ್ಟರ್ ಬೆಂಕಿಯಲ್ಲಿ ಸುಟ್ಟು ಹೋದ ದುರ್ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಾಚಿಹಾಳ ಗ್ರಾಮದಲ್ಲಿ ನಡೆದಿದೆ.
ಕಬ್ಬಿನ ಮೇಲೆ ಹಾಯ್ದು ಹೋಗಿದ್ದ ವಿದ್ಯುತ್ ತಂತಿಯಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಆರೋಪ ಕೇಳಿಬಂದಿದೆ. ಹನಮಂತ ನಾಗಪ್ಪ ತೂಗರಿ ಎಂಬುವರಿಗೆ ಸೇರಿದ ಕಬ್ಬು ಬೆಂಕಿಗಾಹುತಿಯಾಗಿದೆ. ಮುದ್ದೇಬಿಹಾಳದಿಂದ ಅಗ್ನಿಶಾಮಕ ವಾಹನ ಬರುವಷ್ಟರೊಳಗೆ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಲು ಹರಸಾಹಸಪಟ್ಟರು. ಸುಮಾರು ರೂ. 10 ಲಕ್ಷ ಹಾನಿಯಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ..