Banglore

ಕಾಂಗ್ರೆಸ್ ಮುಕ್ತ ರಾಜ್ಯ..ಬಿಜೆಪಿಯ ಹಗಲುಗನಸು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Share

ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಹೇಳಿರುವ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿರುವ ಹಲವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ’. ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಶಾಸಕರು ಸಿಡಿ ಬಿಡುಗಡೆ ಮಾಡುವ ಮಾತನಾಡುತ್ತಿದ್ದಾರೆ. ಇದು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದರು.  ನಗರ ಸ್ಥಳೀಯ ಸಂಸ್ಥೆಯಲ್ಲಿ ಹೆಚ್ಚುವರಿ ತೆರಿಗೆ ಜಾರಿಗೊಳಿಸಲು ಸೂಚನೆ ನೀಡಲಾಗಿದೆ. ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಬರೆ ನೀಡಲು ಸರ್ಕಾರ ಹೊರಟಿದೆ. ಪೆಟ್ರೋಲ್ -ಡೀಸೆಲ್ ಬೆಲೆ ತಿಂಗಳಲ್ಲಿ ಮೂರು ಬಾರಿ ಏರಿಕೆ ಆಗಿದೆ. ಸರ್ಕಾರ ಜನರಿಗೆ ಹೊರೆ ಎನಿಸಿದೆ. ಜನವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಿಲ್ಲದು. ಇನ್ನು ರೈತರು ದೆಹಲಿಯಲ್ಲಿ ಹೋರಾಟ ನಡೆಸಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ರೈತರಿಗೆ ಶಕ್ತಿ ತುಂಬಲು ಕಾಂಗ್ರೆಸ್‍ನಿಂದ ಜ. 20 ರಂದು ರಾಜಭವನ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ ಎಂದರು.

Tags:

error: Content is protected !!