ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಹೊರ ಹಾಕಿದ್ದಾರೆ.
ವಿಜಯಪುರ ದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಬ್ಲಾಕ್ ಮೇಲ್ ಮಾಡುವವರಿಗೆ ಹಣ ನೀಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬ್ಲಾಕ್ಮೇಲ್ ಮಾಡಿ ಮೂವರು ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿದ್ದು ಮೂವರ ಪೈಕಿ ಯಾರೊಬ್ಬರ ಹೆಸರು ಹೇಳದೇ ವಾಗ್ದಾಳಿ ನಡೆಸಿದರು. ಇದೇ ಮೂವರು ಈ ಹಿಂದೆ ನನ್ನ ಭೇಟಿಯಾಗಿದ್ದರು, ನಾವೆಲ್ಲರೂ ಕೂಡಿ ಸಿಎಂ ಯಡಿಯೂರಪ್ಪ ರನ್ನ ಕೆಳಗಿಳಿಸೋಣವೆಂದು ಬೆಂಬಲ ಕೋರಿದರು ಆಗ ಅವರ ಮಾತು ಕೇಳಿ ನನಗೆ ಆಶ್ಚರ್ಯವಾಗಿತ್ತು
ಹಣ ನೀಡಿದವರಿಗೆ, ಬ್ಲಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದ ಯತ್ನಾಳ್ ಆರೋಪಿಸಿದ್ದಾರೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪರನ್ನ ಹೆದರಿಸಿ ಸಚಿವರಾಗಿದ್ದಾರೆ, ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ.
ಈ ಮೂಲಕ ಸಮಸ್ತ ಲಿಂಗಾಯತ ವೀರಶೈವ ಸಮಾಜದ ಮರ್ಯಾದೆಯನ್ನ ಸಿಎಂ ಯಡಿಯೂರಪ್ಪ ತೆಗೆದಿದ್ದಾರೆ ಎಂದು ಹೇಳಿದ್ರು. ಇನ್ನೂ ಸಿಎಂ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಸವಾಲು ಹಾಕಿದರು. ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿ ನನ್ನ ಕೆಳಗಿಳಿಸಿದರೆ ಕೇಂದ್ರದ ವಿರುದ್ಧ ಬಂಡೇಳುವಂತೆ ಯಡಿಯೂರಪ್ಪ ಯೋಜನೆ ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿದರು. ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅದಃ ಪತನ ಆರಂಭವೆಂದೂ ಸವಾಲು ಹಾಕಿದ್ದಾರೆ…