Uncategorized

ಕೇಂದ್ರದ ಕೃಷಿ ಮಸೂದೆ ವಿರೋಧಿ ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೈತ-ಕಾರ್ಮಿಕ ಪರ್ಯಾಯ ಪರೇಡ್-ಸಿದಗೌಡ ಮೊದಗಿ

Share

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಜನವರಿ ೨೬ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ದಿನ ಬೆಂಗಳೂರಿನಲ್ಲಿ ಸಂಯುಕ್ತ ಕರ್ನಾಟಕ ವೇದಿಕೆ ಸಂಘಟನೆಯಿAದ ರೈತರು, ಕಾರ್ಮಿಕರ ಪರ್ಯಾಯ ಪರೇಡ್ ನಡೆಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೊದಗಿ ತಿಳಿಸಿದ್ದಾರೆ.
ಈ ಸಂಬ0ಧ ಶನಿವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಮುಖಂಡ ಸಿದಗೌಡ ಮೊದಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತರು, ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ದಿನ ರೈತರು, ಕಾರ್ಮಿಕರ ಪರ್ಯಾಯ ಪರೇಡ್ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಇನ್ನು ಜ.೨೩ರಂದು ಬೆಳಿಗ್ಗೆ ೧೦ ಗಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಿಂದ ನಮ್ಮ ಪ್ರತಿಭಟನಾ ರ‍್ಯಾಲಿ ಆರಂಭವಾಗಲಿದ್ದು. ಈ ರ‍್ಯಾಲಿಯಲ್ಲಿ ೫೦ಕ್ಕೂ ಹೆಚ್ಚು ಟ್ರಾö್ಯಕ್ಟರ್, ವಾಹನಗಳು ಬೈಕ್‌ಗಳು ಭಾಗಿಯಾಗಲಿವೆ. ಬೆಳಗಾವಿಯಿಂದ ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣೆಗೆರೆ, ಚಿತ್ರದುರ್ಗ ಮಾರ್ಗವಾಗಿ ತೆರಳಿ ೨೫ರಂದು ತುಮಕೂರು ಸಿದ್ಧಗಂಗಾ ಮಠದಲ್ಲಿ ವಾಸ್ತವ್ಯ ಹೂಡಿ, ನಂತರ ೨೬ರಂದು ಬೆಂಗಳೂರಿನಲ್ಲಿ ನಡೆಯಲಿರುವ ರೈತರು, ಕಾರ್ಮಿಕರ ಪರ್ಯಾಯ ಪರೇಡ್‌ನಲ್ಲಿ ಭಾಗಿಯಾಗಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗೇಶ ಸಾತೇರಿ, ಆರ್.ಎಸ್.ದರ್ಗೆ, ಮಹಿಳಾ ಮುಖಂಡೆ ಅಕಿಲಾ ಪಠಾಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

 

 

Tags:

error: Content is protected !!