Belagavi

ಕೇಂದ್ರ, ರಾಜ್ಯದ ಕೃಷಿ ನೀತಿ ವಿರೋಧಿಸಿ ರೈತ ಸಂಘದಿಂದ ಟ್ರ್ಯಾಕ್ಟರ್ ಜಾಥಾ

Share

ಕೇಂದ್ರದ ಕೃಷಿ ನೀತಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ರೈತ, ಕಾರ್ಮಿಕ, ಜನ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತ ಹಿತರಕ್ಷಣಾ ಪರಿವಾರದಿಂದ ಮುಖಂಡ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಟ್ರ್ಯಾಕ್ಟರ್ ಜಾಥಾ ನಡೆಯಿತು.

ಕೇಂದ್ರದ ಕೃಷಿ ನೀತಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ರೈತ ಹಿತರಕ್ಷಣಾ ಪರಿವಾರ ಹಾಗೂ ಕರ್ನಾಟಕ ರೈತ ಸಂಘದ ರೈತರು ಸೋಮವಾರ ಬೆಳಗಾವಿಯಲ್ಲಿ ಟ್ರ್ಯಾಕ್ಟರ್ ಜಾಥಾ ನಡೆಸಿದರು. ರೈತ ಮುಖಂಡ ಬಾಬಾಗೌಡ ಪಾಟೀಲ ನೇತೃತ್ವ ವಹಿಸಿದ್ದರು.


ಚನ್ನಮ್ಮ ವೃತ್ತದಿಮದ ಆರಂಭಗೊಂಡ ರೈತರ ಟ್ರ್ಯಾಕ್ಟರ್ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ನೂರಾರು ರೈತರು ಟ್ರ್ಯಾಕ್ಟರ್ ಸಮೇತ ರಸ್ತೆಗಿಳಿದಿದ್ದರು. ದೆಹಲಿಯಲ್ಲಿ ಹೋರಾಟ ನಿರತ ರೈತರಿಗೆ ಬೆಂಬಲ ಸೂಚಿಸಿ ವಿವಿಧ ರೈತ ಸಂಘಟನೆಗಳ ಹೋರಾಟಗಾರರು, ರೈತ ಚಿಂತಕರು, ಕಾಂಗ್ರೆಸ್, ಜೆಡಿಎಸ್ ಮತ್ತು ಎಡಪಂಥೀಯ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ಹಿಂದಕ್ಕೆ ಪಡೆಯಬೇಕು ಎಂದು ರೈತರು ಘೋಷಣೆ ಮೊಳಗಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಮಾತನಾಡಿ, ಬಿಜೆಪಿ ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು. ಮೊಂಡು ಹಟ ಬಿಡಬೇಕು. ರೈತರೊಂದಿಗೆ ಜಿದ್ದಿಗೆ ಬಿದ್ದರೆ ದೇಶಕ್ಕೆ ಅನ್ನ ನೀಡುವವರೇ ಇಲ್ಲದಂತಾಗುತ್ತದೆ ಎಂದು ಹೇಳಿದರು.
ರೈತ ಸಂಘದ ಮುಖಂಡರು, ಕಾರ್ಯಕರ್ತರು ಟ್ರ್ಯಾಕ್ಟರ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

Tags:

error: Content is protected !!