ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಯಲ್ಲಿ ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದಾರೆ. ಆದ್ರೆ ಅಮಿತ್ ಶಾಗೆ ಪ್ರತಿಭಟನೆ ಬಿಸಿ ಮುಟ್ಟಿಸಲು ರೈತ ಮುಖಂಡರು ಮುಂದಾಗಿದ್ದಾರೆ.
ಹೌದು ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಾರುಕೋಲು ಹೊಡೆಯುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅದೇ ರೀತಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತ ಹೋರಾಟಗಾರರು ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದಾರೆ. ಮಾನ್ಯ ಅಮಿತ್ ಶಾ ಅವರಿಗೆ ಸ್ವಾಗತ ರೈತರ ಬಳಿ ಬಂದು ಕಾನುನು ತಿಳಿಸಿ ಎಂಬ ನಾಮಫಲಕ ಹಿಡಿದುಕೊಂಡು ರೈತರು ಧರಣಿ ನಡೆಸಿದರು.
ಒಟ್ಟಾರೆ ಕೇಂದ್ರ ಸಚಿವ ಅಮಿತ್ ಷಾಗೆ ಪ್ರತಿಭಟನೆ ಬಿಸಿ ಮುಟ್ಟಿಸಲು ರೈತ ಹೋರಾಟಗಾರರು ಮುಂದಾಗಿದ್ದು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ರೈತ ಮುಖಂಡರು ಭಾಗಿಯಾಗಿದ್ದಾರೆ.