State

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

Share

ಕಡಿಮೆ ರಕ್ತದೊತ್ತಡದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಚೇತರಿಸಿಕೊಂಡಿದ್ದು, ಇಂದು ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು ಕಡಿಮೆ ಸಕ್ಕರೆ ಅಂಶದಿಂದ ಅಸ್ವಸ್ಥರಾದರು. ನಂತರ ಅವರನ್ನು ಬಸವೇಶ್ವರ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಸಚಿವರನ್ನು ಆಂಬುಲೆನ್ಸ್‍ನಲ್ಲಿ ಬೆಂಗಳೂರಿಗೆ ಕರೆ ತಂದು ಅಸ್ಟರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಸಚಿವ ಡಿ.ವಿ ಸದಾನಂದಗೌಡ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ತಿಳಿಸಲಾಗಿದೆ.

Tags:

error: Content is protected !!