State

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‍ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Share

ಗೈಲ್ ಇಂಡಿಯಾ ನಿರ್ಮಿಸಿರುವ ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲ ಸಾಗಿಸುವ ಸಾಮಥ್ರ್ಯದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‍ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು.

ಅಂದಾಜು 3,000 ಕೋಟಿ ರೂ. ವೆಚ್ಚದಲ್ಲಿ ಗೈಲ್ ಇಂಡಿಯಾ ನಿರ್ಮಿಸಿರುವ 450 ಕಿ.ಮೀ ಉದ್ದದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‍ಲೈನ್ ಅನ್ನು ಮಂಗಳವಾರ
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‍ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ. ಇದು ಭಾರತಕ್ಕೆ, ವಿಶೇಷವಾಗಿ ಕರ್ನಾಟಕ ಮತ್ತು ಕೇರಳದ ಜನರಿಗೆ ಮಹತ್ವದ ದಿನವಾಗಿದೆ ಎಂದು ತಿಳಿಸಿದರು.

ದಶಕಗಳ ಹಿಂದಿನ ಭಾರತದ ಪ್ರಗತಿ ಹೇಗಿತ್ತು ಎಂದು ನಾನು ಹೇಳಲಾರೆ. ಭಾರತದಲ್ಲಿ ನಿಧಾನಗತಿಯ ಅಭಿವೃದ್ಧಿ ಈಗಿನ ಸ್ಥಿತಿಗೆ ಹೊಂದಾಣಿಕೆ ಆಗುವುದಿಲ್ಲ. ಭಾರತ ಪ್ರಗತಿಯಲ್ಲಿ ವೇಗ ಹೆಚ್ಚಿಸಿಕೊಳ್ಳಬೇಕು. ಅಭಿವೃದ್ಧಿ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬೇಕು ಎಂಬುದು ನಮ್ಮ ತಿಳಿಸಿದರು.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧಮೇಂದ್ರ ಪ್ರಧಾನ್, ಕರ್ನಾಟಕದ ರಾಜ್ಯಪಾಲ ವಜೂಬಾಯಿ ವಾಲಾ, ಕೇರಳ ರಾಜ್ಯಪಾಲ ಆರಿಫ್ ಮಹಮ್ಮದ್ ಖಾನ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಗೇಲ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಜೈನ್ ಮತ್ತಿತರರು ಕಾನ್ಫರೆನ್ಸ್‍ನಲ್ಲಿ ಪಾಲ್ಗೊಂಡಿದ್ದರು.

Tags:

error: Content is protected !!