ರಾಜ್ಯದಲ್ಲಿ ಇದುವರೆಗೆ 11 ಜನರಿಗೆ ಬ್ರಿಟನ್ ಸೋಂಕು ಪತ್ತೆಯಾಗಿದೆ. ಬ್ರಿಟನ್‍ಗೆ ವಿಮಾನಯಾನ ಸೇವೆ ಪುನರಾರಂಭದ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ನಮ್ಮ ಜನ ಕೊರೊನಾ ನಿಯಮಗಳ ಪಾಲನೆಗೆ ನಿರ್ಲಕ್ಷ್ಯ ತೋರುತ್ತಿರುವುದು ಅಪಾಯಕಾರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಸೋಂಕು ನಿರ್ವಹಣೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಅದೇ ರೀತಿ ರಾಜ್ಯದಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ತಾಲೀಮಿನಲ್ಲಿ ಯಾವುದೇ ಲೋಪದೋಷ ಕಂಡುಬಂದಿಲ್ಲ. ನಾಳೆ 2ನೇ ಸುತ್ತಿನ ತಾಲೀಮು ನಡೆಸಲಿದ್ದೇವೆ. ಈ ಕುರಿತು ಇಂದು ಮಧ್ಯಾಹ್ನ 12.30 ಕ್ಕೆ ಕೇಂದ್ರ ಸಚಿವರೊಂದಿಗೆ ಸಭೆಯಿದ್ದು. ಕೇಂದ್ರ ಸಚಿವರು ರಾಜ್ಯಗಳಿಗೆ ಒಂದಷ್ಟು ಮಾರ್ಗಸೂಚಿ ಕೊಡಬಹುದು ಎಂಬ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇದುವರೆಗೆ ಹಕ್ಕಿ ಜ್ವರದ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ. ಕೇರಳ ಗಡಿಭಾಗದಲ್ಲಿರುವ ಜಿಲ್ಲೆಗಳಲ್ಲಿ ವಿಶೇಷ ಗಮನವಹಿಸಿದ್ದೇವೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಜನರು ಜಾಗ್ರತೆವಹಿಸಬೇಕು ಇದೇ ವೇಳೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.