Uncategorized

ಕೊರೊನಾ ವ್ಯಾಕ್ಸಿನ್ ಬರುತ್ತಿದ್ದಂತೆ ಲಸಿಕೆ ನೀಡಲು ಸರ್ವ ಸಿದ್ಧತೆ..ಡಿಸಿ ಎಂ.ಜಿ.ಹಿರೇಮಠ

Share

 

 

 

ಇಡೀ ರಾಜ್ಯದಲ್ಲಿ ಐದು ಜಿಲ್ಲೆಗಳಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈರನ್ ಮಾಡಲಾಗುತ್ತಿದ್ದು. ಇದರಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕೇಂದ್ರಗಳಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈರನ್ ಮಾಡಲಾಗುತ್ತಿದೆ. ವ್ಯಾಕ್ಸಿನ್ ಬರುತ್ತಿದ್ದಂತೆ ಲಸಿಕೆ ನೀಡಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ತಿಳಿಸಿದರು.
ವಾ.ಓ: ಶನಿವಾರ ನಗರದ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ ಮಹಾಂತೇಶ ಹಿರೇಮಠ ಅವರು ಕೊರೊನಾ ವ್ಯಾಕ್ಸಿನ್ ಡ್ರೈರನ್‍ನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು ಬೆಳಗಾವಿ ಜಿಲ್ಲೆಯ ವಂಟಮುರಿಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಿತ್ತೂರು ಸಮುದಾಯ ಆರೋಗ್ಯ ಕೇಂದ್ರ, ಹುಕ್ಕೇರಿ ತಾಲೂಕು ಆಸ್ಪತ್ರೆಯಲ್ಲಿ ಮೂರು ಕೇಂದ್ರಗಳಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈರನ್ ಯಶಸ್ವಿಯಾಗಿ ನಡೆಯುತ್ತಿದೆ. ಲಸಿಕೆ ಹಾಕುವಾಗ ರಜಿಸ್ಟ್ರೇಶನ್, ವೆರಿಫಿಕೇಶನ್, ವ್ಯಾಕ್ಸಿನೇಶನ್, ಆಬ್ಸರ್ವೇಶನ್ ಈ ರೀತಿ ನಾಲ್ಕು ಹಂತಗಳಲ್ಲಿ ವ್ಯಾಕ್ಸಿನ್ ಡ್ರೈರನ್ ಮಾಡಲಾಗುತ್ತಿದೆ. ಸಿಬ್ಬಂದಿ ಅಗತ್ಯ ತರಬೇತಿ ಪಡೆದುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ವ್ಯಾಕ್ಸಿನ್ ಸ್ಟೋರೇಜ್ ಕುರಿತು ಇದೇ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಬಾಕ್ಸನಲ್ಲಿ ಡೀಪರೇಜರ್ ಇದೆ, ಟೆಂಪರೇಚರ್ ಸಾಮಗ್ರಿಗಳಿದ್ದು ಅದರಲ್ಲಿ ತಂದು ಇಡುವ ವ್ಯವಸ್ಥೆ ಮಾಡಿದ್ದೇವೆ. ಅದೇ ರೀತಿ 8 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡುವ ಸಾಮಥ್ರ್ಯ ವ್ಯಾಕ್ಸಿನ್ ಡಿಪೋ ಹೊಂದಿದೆ. ವ್ಯಾಕ್ಸಿನ್ ಖಾಲಿ ಆಗುತ್ತಿದ್ದಂತೆ ಹಂತ ಹಂತವಾಗಿ ಮತ್ತೆ ವ್ಯಾಕ್ಸಿನ್ ಬರುತ್ತಿರುತ್ತದೆ. ಅದೇ ರೀತಿ 28 ಸಾವಿರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಆರೋಗ್ಯ ಕಾರ್ಯಕರ್ತರು ಈಗಾಗಲೇ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಸಾರ್ವಜನಿಕರಿಗೆ ಲಸಿಕೆ ನೀಡುವ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ಜಿಲ್ಲಾಧಿಕಾರಿಗಳು ಈಗ ಆರೋಗ್ಯ ಕಾರ್ಯಕರ್ತರಿಗೆ ನೀಡುವ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ. ನಂತರ ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನ್ವಯ ಯಾರಿಗೆ ಲಸಿಕೆ ನೀಡಬೇಕು ಎಂಬ ಕುರಿತು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿಎಚ್‍ಓ ಡಾ.ಎಸ್.ವ್ಹಿ.ಮುನ್ಯಾಳ, ಡಾ.ಸಂಜಯ್ ಡುಮ್ಮಗೋಳ, ಡಾ.ಈಶ್ವರ ಗಡಾದ ಸೇರಿದಂತೆ ಹಲವು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:

error: Content is protected !!