COVID-19

ಕೋವಿಡ್ ಟೆಸ್ಟಗೆ ನಕಾರ: ವಾಪಸ್ ತೆರಳಿದ ವಿದ್ಯಾರ್ಥಿಗಳು

Share

ರಾಮದುರ್ಗ ತಾಲೂಕು ಆಸ್ಪತ್ರೆಗೆ ಕೋರೋನಾ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳನ್ನು ಮರಳಿ ಕಳುಹಿಸಲಾಗಿದೆ. ಶಾಲೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಬಂದಿದ್ದ ವಿದ್ಯಾರ್ಥಿಗಳಿಗೆ ಕೋವಿಡ ಪರೀಕ್ಷೆ ಮಾಡದೇ ಅಧಿಕಾರಿಗಳು ಮರಳಿ ಕಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕ ಆಸ್ಪತ್ರೆಯಲ್ಲಿ ಸೋಮವಾರ ಸಾಕಷ್ಟು ವಿದ್ಯಾರ್ಥಿಗಳು ಕೋವಿಡ ಪರೀಕ್ಷೆಗೆ ಆಗಮಿಸಿದ್ದರು. ಆದರೆ ಅಧಿಕಾರಿಗಳು ಕೋವಿಡ ಪರೀಕ್ಷೆ ಮಾಡದೇ ವಿದ್ಯಾರ್ಥಿಗಳನ್ನ ಮರಳಿ ಕಳಿಸಿದರು.

ಶಾಲೆ ಪ್ರಾರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೋವಿಡ ಪರೀಕ್ಷೆ ಮಾಡಿಸಿಕೊಳ್ಳಲು ಬಂದಿದ್ದರು. ಇದರಲ್ಲಿ ಆರ್ಮಿ ಕೋಚಿಂಗ್‍ಗೆ ತೆರಳಬೇಕಿದ್ದ ಕೆಲವು ವಿದ್ಯಾರ್ಥಿಗಳೂ ಇದ್ದರು.
ವಿದ್ಯಾರ್ಥಿಗಳಿಗೆಲ್ಲ ಕೋವಿಡ ಪರೀಕ್ಷೆ ಕಡ್ಡಾಯ ಮಾಡಿರುವುದರಿಂದ ಕೋವಿಡ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.
ಇನ್ನು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಕೇಳಿದ್ರೆ ನಮಗೆ ಯಾವುದೇ ಮಾಹಿತಿ ಇಲ್ಲ ಮೇಲಾಧಿಕಾರಿಗಳಿಂದ ಯಾವುದೇ ಸೂಚನೆಗಳಿಲ್ಲ. ಆದೇಶ ಬಂದರೆ ಕೋವಿಡ್ ಪರೀಕ್ಷೆ ಮಾಡುತ್ತೇವೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಒಂದು ಕಡೆ ಸರ್ಕಾರ ಶಾಲೆ, ಕಾಲೇಜುಗಳನ್ನು ತೆರೆದು, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ಹೇಳುತ್ತಿದೆ. ಇನ್ನೊಂದು ಕಡೆ ಕೋವಿಡ್ ಪರೀಕ್ಷೆಗೆ ವ್ಯವಸ್ಥೆಯೇ ಇಲ್ಲ. ಸರ್ಕಾರದ ಆಡಳಿತ ವ್ಯವಸ್ಥೆಯ ಕಾರ್ಯ ವೈಖರಿ ಜನರಲ್ಲಿ ಗೊಂದಲ ಮೂಡಿಸಿದೆ. ಇದೇನು ಸರ್ಕಾರ, ಇದೆಂಥ ಆಡಳಿತ ಎಂದು ಜನರು ಕೇಳುತ್ತಿದ್ದಾರೆ.

 

Tags:

error: Content is protected !!