COVID-19

ಕೋವಿಡ್ ಲಸಿಕೆ ಆವಿಷ್ಕಾರ..ಭಾರತ ಹೆಮ್ಮೆ ಪಡುವ ವಿಚಾರ..ಡಾ.ಕೆ.ಸುಧಾಕರ್ ಹರ್ಷ

Share

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮ ದೇಶದಲ್ಲೇ ಶೀಘ್ರವಾಗಿ ಕೊರೊನಾ ಲಸಿಕೆ ಆವಿಷ್ಕಾರ ಮಾಡಿದ್ದು, ಇದು ಇಡೀ ಭಾರತೀಯರು ಹೆಮ್ಮೆ ಪಡುವ ವಿಚಾರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಸಿಕೆ ಆವಿಷ್ಕಾರಕ್ಕಾಗಿ ಶ್ರಮವಹಿಸಿದ ವಿಜ್ಞಾನಿಗಳು ಮತ್ತು ಪ್ರೋತ್ಸಾಹಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಭಿವೃದ್ಧಿ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮದೇ ಆದ ಕೊರೋನಾ ಲಸಿಕೆ ಕಂಡುಹಿಡಿಯಲಾಗಿದೆ. ಈ ಲಸಿಕೆಯನ್ನು ಮೊದಲಿಗೆ ಕೊರೊನಾ ವಾರಿಯರ್ಸ್‍ಗೆ ನೀಡಬಹುದು ಎನ್ನಲಾಗುತ್ತಿದೆ. 3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದ ಬಳಿಕ ಅಂತಿಮವಾಗಿ ಪರವಾನಗಿ ದೊರೆಯಬಹುದು. ನಾನು ಕೂಡ ಸಂಬಂಧಪಟ್ಟ ವಿಜ್ಞಾನಿಗಳೊಂದಿಗೆ ಮಾತನಾಡಿದ್ದು, ಇದು ಯಶಸ್ವಿಯಾದ ಲಸಿಕೆ ಹಾಗೂ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ. ಇದು ವಿಶ್ವಕ್ಕೆ ಭಾರತೀಯರ ಅತೀ ದೊಡ್ಡ ಕೊಡುಗೆಯಾಗಿದೆ ಎಂದರು.

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಪೂರ್ಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕಿದ್ದರೆ ಅದನ್ನೂ ಪಡೆಯುವ ಬಗ್ಗೆ ಚಿಂತಿಸಲಾಗುವುದು ಎಂದರು.

Tags:

error: Content is protected !!