ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ತಮ್ಮ ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿದ ದಂಪತಿ ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮಂಗಳವಾರ ಬೆಳಗ್ಗೆ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿರುವ ದಂಪತಿ ನಂತರ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಪತಿ ಪ್ರವೀಣ್ ಶೆಟ್ಟಿ (37) , ಪತ್ನಿ ರಾಜೇಶ್ವರಿ (27) ಮಕ್ಕಳಾದ ಅಮೃತ (8) ಹಾಗೂ ಅದ್ವಿತ್ (6) ಎಂದು ಗುರುತಿಸಲಾಗಿದೆ. ದಂಪತಿ ಕೃತ್ಯಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿಪಿಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲಿಸಿದರು. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.