Events

ಖಾನಾಪೂರ ತಹಶೀಲ್ದಾರ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ

Share

ಖಾನಾಪೂರ ತಹಸೀಲ್ದಾರ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಿಸಲಾಯಿತು. ಸಿದ್ದರಾಮೇಶ್ವರ ಭಾವಚಿತ್ರಕ್ಕೆ ತಹಸೀಲ್ದಾರ ರೇಷ್ಮಾ ತಾಳಿಕೋಟಿ ಪೂಜೆ ಸಲ್ಲಿಸಿದರು.

ಖಾನಾಪೂರ ತಹಶೀಲ್ದಾರ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ ರೇಷ್ಮಾ ತಾಳಿಕೋಟಿ ಶಿವಯೋಗಿ ಸಿದ್ದರಾಮೇಶ್ವರರ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು. ೧೨ನೇ ಶತಮಾನದ ಸಂತ ಶಿವಯೋಗಿ ಸಿದ್ಧರಾಮೇಶ್ವರರು ಅನುಭವ ಮಂಟಪದ ಸಕ್ರೀಯ ಸದಸ್ಯರಾಗುವುದರ ಜೊತೆಗೆ ವಚನಕಾರರು ಸಮಾಜದ ಉನ್ನತಿಗಾಗಿ ಶ್ರಮಿಸಿರುವವರು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಕಾರ್ಯಾಲಯದಲ್ಲಿನ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

 

Tags:

error: Content is protected !!