ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಅವಿವೇಕಿತನದ್ದು. ಸಿಎಂ ಏನಾದರೂ ಹೇಳುವಾಗ ಎಚ್ಚರಿಕೆ ಇರಬೇಕು. ಸಾವಿರ ಜನ ಸಿಎಂ ಬಂದರೂ ಬೆಳಗಾವಿ ಕರ್ನಾಟಕದಲ್ಲೇ ಇರುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಕ್ಕ ಉತ್ತರ ಕೊಟ್ಟಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಬೆಳಗಾವಿ, ನಿಪ್ಪಾಣಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಯಾವುದೇ ಕಾರಣಕ್ಕೂ ಅದು ಮಹಾರಾಷ್ಟ್ರಕ್ಕೆ ಸೇರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.