ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯ ಸಭಾಂಗಣದಲ್ಲಿ ಬುಧವಾರ ಪೂರ್ವಸಿದ್ಧತಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಬಾರಿ ಗಣರಾಜ್ಯೋತ್ಸವನ್ನು ಸರಳ ಸಂಕ್ಷಿಪ್ತವಾಗಿ ಆದರೆ ಸಂಭ್ರಮ, ಸಡಗರದಿಂದ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಣಯಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅಧಿಕಾರಿಗಳ ಸಲಹೆ ಸೂಚನೆ ಪಡೆದು ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿ ಮಾರ್ಗದರ್ಶನ ನೀಡಿದರು.
ಗಣರಾಜ್ಯೋತ್ಸವ ಪೂರ್ವ ಸಿದ್ಧತೆ ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಾತನಾಡಿ, ಈ ಬಾರಿ ಗಣರಾಜ್ಯೋತ್ಸವವನ್ನು ಸರಳ, ಸಂಕ್ಷಿಪ್ತವಾಗಿ ಆಚರಿಸಬೇಕು. ಎಲ್ಲ ಸರ್ಕಾರಿ ಕಚೇರಿಗಳಿಗೆ ಆ ದಿನ ರಜಾ ದಿನವಾಗಿದ್ದರೂ ಯಾರೂ ರಜೆ ಮಾಡುವಂತಿಲ್ಲ ಎಲ್ಲರೂ ಕಡ್ಡಾಯವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಧ್ವಜಾರೋಹಣ, ಪೊಲೀಸ್, ಗೃಹ ರಕ್ಷಕ ದಳ, ಅಗ್ನಿಶಾಮಕ ದಳ, ಎನ್‍ಸಿಸಿ ಸೇರಿ ವಿವಿಧ ಇಲಾಖೆಗಳ ಕವಾಯತು ಇರಲಿದೆ. ಆಯಾ ಶಾಲೆಗಳಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸಲ್ಲಿಸುವುದು ಕಡ್ಡಾಯವಾಗಿದೆ. ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾತನಾಡಿ, ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿ ಕೋವಿಡ್ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಎಲ್ಲ ಅಧಿಕಾರಿಗಳು, ಸಿಬ್ಬಂದಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾಡಳಿತ, ಪೊಲೀಸ್, ತಾಲೂಕು ಆಡಳಿತ ಸೇರಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.