ಮಹಾಮಾರಿ ಕೊರೊನಾ ರೋಗಕ್ಕೆ ದೇಶಾದ್ಯಂತ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಆ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿಯೂ ಲಸಿಕೆ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.

ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಗಣೇಶ ಹುಕ್ಕೇರಿ, ವಿಧಾನಪರಿಷತ್ತಿನ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸಸಿಗೆ ನೀರು ಎರೆಯುವ ಮೂಲಕ ಕೋವಿಡ ಲಸಿಕೆಯನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಂತರ ಸಚಿವೆ ಶಶಿಕಲಾ ಜೋಲ್ಲೆ ಮಾತನಾಡಿ ಕೊರೊನಾ ನಿರ್ವಹಣೆ ಸಂದರ್ಭದಲ್ಲಿ ಕೇಂದ್ರ ರಾಜ್ಯ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಕೋವಿಡ್ ಲಸಿಕೆಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿವರೆಗೆ ತಲುಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಗಳ ಜೊತೆ ಸಭೆಯನ್ನು ಮಾಡಿ ಲಸಿಕೆಯ ಹಂಚಿಕೆಯನ್ನು ಸಮರ್ಪಕವಾಗಿ ಮಾಡಲಾಗುವುದು. ಇವತ್ತು ಆರಂಭದ ದಿನ 100 ಜನ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆಯನ್ನು ನಿಡಲಾಗುವುದು ಎಂದು ತಿಳಿಸಿದರು.
ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಗಣೇಶ ಹುಕ್ಕೇರಿಯವರು ಮಾತನಾಡಿ ಕೊರೊನಾ ಸಂದರ್ಭದಲ್ಲಿ ನಮ್ಮ ಚಿಕ್ಕೋಡಿ ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು ಚಿಕ್ಕೋಡಿ ಭಾಗದಲ್ಲಿ ಹೆಚ್ಚಿನ ಜನಸಂಖ್ಯೆ ಇರುವುದರಿಂದ ಹೆಚ್ಚಿನ ಲಸಿಕೆಯನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಒದಗಿಸಬೇಕೆಂದು ಶಾಸಕ ಗಣೇಶ ಹುಕ್ಕೇರಿಯವರು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಟಿಎಚ್‍ಓ ಡಾ.ವಿಠ್ಠಲ ಶಿಂಧೆ, ವೈದ್ಯಾಧಿಕಾರಿ ಸಂತೋಷ ಕೊಣ್ಣೂರೆ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.