Chikkodi

ಚಿಕ್ಕೋಡಿ-ಸದಲಗಾ ಕ್ಷೇತ್ರ ಗ್ರಾ.ಪಂ.ರಿಸಲ್ಟ ಫೈಟ್..ಗಣೇಶ ಹುಕ್ಕೇರಿಗೆ ಕೌಂಟರ್ ಕೊಟ್ಟ ಮಹಾಂತೇಶ ಕವಟಗಿಮಠ

Share

ಚಿಕ್ಕೋಡಿ-ಸದಲಗಾ ಕ್ಷೇತ್ರದ ಗ್ರಾಮ ಪಂಚಾಯತ ಚುನಾವಣೆಯಲ್ಲಿ 25 ಗ್ರಾಮ ಪಂಚಾಯತಿಗಳಲ್ಲಿ 13 ಗ್ರಾಮ ಪಂಚಾಯಿತಿಗಳು ಬಿಜೆಪಿ ಪರವಾಗಿವೆ ಎಂದು ಹೇಳುವ ಮೂಲಕ ವಿಧಾನಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಶಾಸಕ ಗಣೇಶ ಹುಕ್ಕೇರಿಗೆ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕೋಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಂತೇಶ ಕವಟಗಿಮಠ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಜಯಗಳಿಸಿದ್ದಾರೆ. ಈ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಹಾಗೂ ವಿಶೇಷವಾಗಿ ಚಿಕ್ಕೋಡಿ- ಸದಲಗಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕರಾದ ಗಣೇಶ ಹುಕ್ಕೇರಿ ಅವರು ಕಾಂಗ್ರೆಸ್ ಪಕ್ಷದ ಶಾಸಕರಾದರೂ ಕೂಡ ಈ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲುವು ಸಾಧಿಸಿದ್ದಾರೆ. 25 ಗ್ರಾಮಪಂಚಾಯತ ಪೈಕಿ 13 ಗ್ರಾಮಪಂಚಾಯಿತಿಗಳು ಬಿಜೆಪಿ ಪರವಾಗಿವೆ ಹಾಗೂ 10 ಗ್ರಾಮಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬಹುಮತವನ್ನು ಸಾಧಿಸಿದೆ.

ಇನ್ನುಳಿದಂತೆ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಸಮಬಲದ ಪಾರುಪತ್ಯವನ್ನು ಹೊಂದಿದೆ. ಈ ಮೂಲಕ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ 18 ಗ್ರಾಮಪಂಚಾಯಿತಿಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದೇವೆ ಎಂದು ಹೇಳಿಕೆ ನೀಡುತ್ತಿದ್ದ ಶಾಸಕ ಗಣೇಶ ಹುಕ್ಕೇರಿ ಅವರಿಗೆ ವಿಧಾನಪರಿಷತ್ತಿನ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಕೌಂಟರ್ ನೀಡಿದ್ದಾರೆ.

ಇನ್ನು ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಗೆದ್ದ ಅಭ್ಯರ್ಥಿಗಳು ಗ್ರಾಮೀಣ ಭಾಗದಲ್ಲಿ ಇರತಕ್ಕಂತ ಮೂಲ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಪರಿಹರಿಸುವ ಮೂಲಕ ಜನ ಸೇವೆಗೆ ಮುಂದಾಗಬೇಕು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರತಕ್ಕಂತಹ ಯೋಜನೆಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕೆಲಸವನ್ನು ಗ್ರಾಮ ಪಂಚಾಯಿತಿ ಸದಸ್ಯರು ಮಾಡಬೇಕೆಂದು ವಿಧಾನಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿಯ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೆರ್ಲಿ, ಸತೀಷ ಅಪ್ಪಾಜಿಗೋಳ, ಬಸವರಾಜ ಡೋಣವಾಡೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Tags:

error: Content is protected !!