ಬೆಳಗಾವಿಯಲ್ಲಿ ಜನವರಿ 17ರಂದು ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಇಂದು ಬೆಳಗಾವಿ ನಗರದ ವಿವಿಧೆಡೆ ಸ್ಥಳ ಪರಿಶೀಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾರ್ಯಕ್ರಮದ ಸಂಕ್ಷಿಪ್ತ ಮಾಹಿತಿ ನೀಡಿದರು.
ಬೆಳಗಾವಿಯಲ್ಲಿ ಜನವರಿ 17ರಂದು ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಗೃಹ ಸಚಿವ ಅಮೀತ್ ಶಾ ಪಾಲ್ಗೊಳ್ಳಲಿದ್ದು, ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಸೇರಿ ಲಕ್ಷಾಂತರ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನ, ಜಿಲ್ಲಾ ಕ್ರೀಡಾಂಗಣ ಸೇರಿ ಹಲವು ಪ್ರಮುಖ ಸ್ಥಳಗಳ ವೀಕ್ಷಣೆಗೆ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರೊಂದಿಗೆ ಸಂಚರಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಬೆಳಗಾವಿಯಲ್ಲಿ ಜನವರಿ 17ರಂದು ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಗೃಹ ಸಚಿವ ಅಮೀತ್ ಶಾ ಪಾಲ್ಗೊಳ್ಳುವರು. ಅಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಈ ವೇಳೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರೂ ಸೇರಿ 2-3 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕೋವಿಡ್ ನಿಯಮ ಪಾಲಿಸಿ ಸಮಾವೇಶ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು. ನಂತರ ಬೆಳಗಾವಿಯಲ್ಲೇ ಕೇಂದ್ರ ಸಚಿವ ಅಮಿತ್ ಶಾ, ಜನಪ್ರತಿನಿಧಿಗಳ ಸಭೆ ನಡೆಸುವ ನಿರೀಕ್ಷೆ ಇದೆ ಎಂದರು.
ಇನ್ನು ಮಹಾಮಾರಿ ಕೊರೋನಾ ತೊಲಗಿಸಲು ಸ್ವದೇಶಿ ಲಸಿಕೆ ತಯಾರಾಗಿರುವುದು ಸಂತಸ ಪಡಬೇಕಾದ ವಿಚಾರ. ರಾಜ್ಯದ ಒಂದೆರಡು ಸ್ಥಳಗಳನ್ನು ನಿಗದಿ ಮಾಡಿ ಲಸಿಕೆ ನೀಡುವ ಬದಲು ಎಲ್ಲರಿಗೂ ತಲುಪಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ತಲುಪಲಿದೆ ಎಂದರು.
ಈ ವೇಳೆ ಶಾಸಕರಾದ ಅನಿಲ ಬೆನಕೆ, ಮಾಜಿ ಶಾಸಕರಾದ ಸಂಜಯ ಪಾಟೀಲ, ಶಶಿಕಾಂತ ನಾಯ್ಕ, ಶಶಿಕಾಂತ ಪಾಟೀಲ, ಬಿಜೆಪಿ ಮುಖಂಡರು, ಕಾರ್ಯಕರ್ತರು, ಡಿಸಿಪಿ ವಿಕ್ರಮ ಆಮ್ಟೆ ಮತ್ತಿತರರು ಇದ್ದರು.