ನಾವು ಮೊದಲು ಜನಸಂಘದಲ್ಲಿ ದೀಪದ ಚಿತ್ರ ಇದ್ದ ಕರಿ ಟೋಪಿ ಹಾಕುತ್ತಿದ್ದೆವು. ಸಂಘಟನೆಗಾಗಿ ನಮ್ಮ ತಂದೆ ಮೂರು ತಿಂಗಳು ಜೈಲಿನಲ್ಲಿದ್ದರು. ನಾವು ಉದಯ ಆಗಿದ್ದು ಜನಸಂಘದಿಂದ, ಹಾಫ್ ಚಡ್ಡಿ ಹಾಕುತ್ತಿದ್ದೆವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂದ ರಮೇಶ್ ಜಾರಕಿಹೊಳಿ ಹೇಳಿದರು.
: ಬೆಳಗಾವಿಯ ನಾವಗೆಯ ಗಣೇಶ ಬಾಗ್‍ನಲ್ಲಿ ಭಾನುವಾರ ನಡೆದ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂದ ರಮೇಶ್ ಜಾರಕಿಹೊಳಿ ಮಾತನಾಡಿ, ನಾವು ಉದಯ ಆಗಿದ್ದು ಜನಸಂಘದಿಂದ, ಹಾಫ್ ಚಡ್ಡಿ ಹಾಕುತ್ತಿದ್ದೆವು. ಅನಿವಾರ್ಯವಾಗಿ ಕಾಂಗ್ರೆಸ್ ಗೆ ಹೋಗಬೇಕಾಯಿತು. ಜಾರಕಿಹೊಳಿ ಕುಟುಂಬ ಜನಸಂಘದಿಂದ ಬಂದಿದೆ. ನಮ್ಮ ತಂದೆಯವರು ಜಗನ್ನಾಥ ಜೋಶಿ ಅವರ ಅನುಯಾಯಿ. ಗೋವಾ ವಿಮೋಚನೆಗಾಗಿ ಹೋರಾಟ ಮಾಡಿ ಜೈಲಿನಲ್ಲಿದ್ದರು. ಒಮ್ಮೆ ಸುರೇಶ್ ಅಂಗಡಿ ಅವರಿಗೆ ಜನಸಂಘದ ಚಿಹ್ನೆ ಬಗ್ಗೆ ಕೇಳಿದ್ದೆ. ಜನಸಂಘದ ಚಿತ್ರ ಸುರೇಶ ಅಂಗಡಿ ಅವರಿಗೆ ಗೊತ್ತಿರಲಿಲ್ಲ ಎಂದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ಸಿಕ್ಕರೂ ಬಿಜೆಪಿ ಪರವಾಗಿಯೇ ಕೆಲಸ ಮಾಡಬೇಕು. ಅವರೆಲ್ಲರೂ ದ್ರೋಹ ಮಾಡುವುದಿಲ್ಲ ಎಂದು ಮಹಾರಾಷ್ಟ್ರದ ಜ್ಯೋತಿಬಾ ದೇವರ ಪಾದ ಮುಟ್ಟಿ ಆಣೆ ಮಾಡಬೇಕು ಎಂದರು.
ಜನವರಿ 17ರಂದು ಬೆಳಗಾವಿಯಲ್ಲಿ ಅಮಿತ್ ಶಾ ಕಾರ್ಯಕ್ರಮ ಇದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಒಂದು ಲಕ್ಷ ಜನ ಬರಬೇಕು. ನಿಮಗೇನು ಸಹಾಯ ಬೇಕು, ಎಲ್ಲಾ ವ್ಯವಸ್ಥೆ ಮಾಡುತ್ತೇನೆ. ಮೂರರಿಂದ ನಾಲ್ಕು ಲಕ್ಷ ಜನ ಸೇರಿಸುವ ಸಂಕಲ್ಪ ಮಾಡಿದ್ದೇವೆ. 2023ರಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುತ್ತೇನೆ ಎಂಬ ಸಂಕಲ್ಪ ಮಾಡಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.