ಜ.17ರಂದು ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲೆಯ ಬಿಜೆಪಿ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು.
ಹೌದು ಬೆಳಗಾವಿ ನಗರದ ಹೊರವಲಯದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಸಭೆ ನಡೆಸಿದ ಬಿಜೆಪಿ ಮುಖಂಡರು ಜ.17ಕ್ಕೆ ಜನಸೇವಕ ಸಮಾವೇಶವು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿನ್ನೆಲೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಚರ್ಚೆ ನಡೆಸಿದರು. ಕೋವಿಡ್-19 ಮಾರ್ಗಸೂಚಿಯಂತೆ ಕಾರ್ಯಕರ್ತರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ಬಿಜೆಪಿ ಮುಖಂಡರ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ಅದೇ ರೀತಿ ಇನ್ನು ಹಲವು ವಿಷಯಗಳ ಕುರಿತು ಸುಧೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಚಿವ ಜಗದೀಶ ಶೆಟ್ಟರ್, ಸಂಸದ ಅಣ್ಣಾಸಾಹೇಬ ಜೊಲ್ಲೆ, ಡಾ.ಪ್ರಭಾಕರ್ ಕೋರೆ, ಶಾಸಕರಾದ ಉಮೇಶ ಕತ್ತಿ, ಅಭಯ್ ಪಾಟೀಲ್, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಮಹೇಶ ಕುಮಟಳ್ಳಿ, ಪಿ.ರಾಜೀವ್, ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.