Events

ಜ.30, 31ರಂದು ಕಾಗವಾಡದಲ್ಲಿ ಬೆಳಗಾವಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ

Share

ಬೆಳಗಾವಿ : ಇದೇ ತಿಂಗಳ 30 ಹಾಗೂ 31 ರಂದು ಕಾಗವಾಡದಲ್ಲಿ ಬೆಳಗಾವಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ ತಿಳಿಸಿದರು.

ಬೆಳಗಾವಿಯಲ್ಲಿ ಪತ್ರಿಕಾ ಪರಿಷತ್ತಿನಲ್ಲಿಂದು ಮಾತನಾಡಿದ ಅವರು ಮಾಜಿ ರಾಜ್ಯಸಭಾ ಸದಸ್ಯ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ ಅವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮನು ಬಳಿಗಾರ್ ಉದ್ಘಾಟಿಸಲಿದ್ದಾರೆ. ಉಗಾರ ಖುರ್ದದ ಶ್ರೀ ಮಲ್ಲಿಕಾರ್ಜುನ ಗುರುದೇವಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಮುರಗೋಡ ಶ್ರೀಮಹಾಂತ ದುರದುಂಡೀಶ್ವರ ಮಠದ ಶ್ರೀ ನೀಲಕಂಠೇಶ್ವರ ಮಹಾಸ್ವಾಮಿಗಳು ಹಾಗೂ ಕಾಗವಾಡ ಮಲ್ಲಿಕಾರ್ಜುನ ಗುರುದೇವಾಶ್ರಮದ ಶ್ರೀ ಯತೀಶ್ವರಾನಂದ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದವರು ಹೇಳಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯದ ಕೈಮಗ್ಗ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ಅವರು ವಹಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉಪಸ್ಥಿತರಿರಲಿದ್ದಾರೆ.

ಪುಸ್ತಕ ಮಳಿಗೆ ಹಾಗೂ ಚಿತ್ರಕಲಾ ಪ್ರದರ್ಶನ ಉದ್ಘಾಟನೆಯನ್ನು ಜಿಲ್ಲಾ ಸಚಿವ ರಮೇಶ್ ಜಾರಕಿಹೊಳಿ ನೆರವೇರಿಸಲಿದ್ದಾರೆ ಸಮ್ಮೇಳನ ಸಂಚಿಕೆ ಹಾಗೂ ಗ್ರಂಥಗಳ ಲೋಕಾರ್ಪಣೆಯನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಉತ್ತಮ ಕಾಂಬಳೆ, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಕರ್ನಾಟಕ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕರ್ನಾಟಕ ಕೊಳಚೆ ನಿರ್ಮೂಲನ ನಿಗಮ ಮಂಡಳಿಯ ಅಧ್ಯಕ್ಷ ಹಾಗೂ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಕುಡುಚಿ ಶಾಸಕ ಹಾಗೂ ತಾಂಡಾ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಪಿ.ರಾಜೀವ್, ರಾಯಬಾಗ ಶಾಸಕ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ ,ಕಾಗವಾಡ ಶಿರಗುಪ್ಪಿ ಶುಗರ್ಸ್ ಅಧ್ಯಕ್ಷ ಕಲ್ಲಪ್ಪಣ್ಣ ಮಗೆನ್ನವರ ,ಉಗಾರ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚಂದನ್ ಶಿರಗಾಂವ್ಕರ್ ,ಹಿರಿಯ ಸಾಹಿತಿ ಸರಜೂ ಕಾಟ್ಕರ್ ,ಉತ್ತರ ಕರ್ನಾಟಕ ಕನ್ನಡ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಹಿರಿಯ ಪತ್ರಕರ್ತ ಮುರುಗೇಶ ಶಿವಪೂಜಿ ಮತ್ತು ನಿಕಟಪೂರ್ವ ಬೆಳಗಾವಿ ಜಿಲ್ಲಾ ಸಮ್ಮೇಳನಾಧ್ಯಕ್ಷೆ ಹಿರಿಯ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಮುಂತಾದವರು ಆಗಮಿಸಲಿದ್ದಾರೆ ಎಂದು ಮಂಗಲಾ ಮೆಟಗುಡ್ಡ ವಿವರಿಸಿದರು.
ಇನ್ನು ಇದೇ ವೇಳೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀ ಅಶೋಕ ದುಡಗುಂಟಿ ಅವರು ಬೆಳಗಾವಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ತಾಲೂಕುಗಳ ಕಸಾಪ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!