Belagavi

ಟ್ರಕ್ ಬಡಿದು ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಸಾವು

Share

ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಹಲಗಾ ಬಸ್ತವಾಡ ಬಳಿ ಗುರುವಾರ ಸಂಜೆ ಟ್ರಕ್ ಬಡಿದು ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತನನ್ನು ಹಲಗಾ ಬಸ್ತವಾಡ ಗ್ರಾಮದ 22 ವರ್ಷದ ಯುವಕ ಆಕಾಶ ಪಾಟೀಲ ಎಂದು ಗುರುತಿಸಲಾಗಿದೆ. ಈತ ಸ್ವಂತ ಊರು ಬಸ್ತವಾಡ ಕಡೆಗೆ ದ್ವಿಚಕ್ರವಾಹನದಲ್ಲಿ ಹೊರಟಿದ್ದ. ಟ್ರಕ್ ಬಡಿದ ರಭಸಕ್ಕೆ ತಲೆಗೆ ಭಾರಿ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.  ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!