2020ರ ಡಿಸೆಂಬರ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಬೆಳಗಾವಿ ನಗರ ಪೊಲೀಸ್ ಸಿಬ್ಬಂದಿಗಳಿಗೆ ಡಾ.ವಿಕ್ರಮ್ ಆಮ್ಟೆ ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ನೀಡಿದರು.
ಮಂಗಳವಾರ ತಮ್ಮ ಕಚೇರಿಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಬೆಳಗಾವಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಾದ ಎಸ್.ಬಿ. ಸದಲಗಿ, ಶುಭದಾ ನಾಯ್ಕ, ವಾಯ್.ವಾಯ್.ತಳೇವಾಡ, ಸಿ.ಎಂ. ಹುಣಚ್ಯಾಳ ಇವರ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ಡಿಸಿಪಿ ಡಾ.ವಿಕ್ರಮ್ ಆಮ್ಟೆ ವಿತರಿಸಿದರು.
ಪ್ರತಿ ತಿಂಗಳು ಒಳ್ಳೆಯ ರೀತಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ವಿತರಿಸಿ ಗೌರವಿಸಲಾಗುತ್ತದೆ.