Uncategorized

ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿಗಾಗಿ ಅರ್ಜಿ ಆಹ್ವಾನ

Share

ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೋಳಿಸುತ್ತಿರುವ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ”ಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಹಣ್ಣು, ತರಕಾರಿ, ಹೂವು ಹಾಗೂ ತೋಟದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು, ಬೆಳಗಾವಿ ತಾಲ್ಲೂಕಿನಲ್ಲಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಮೊದಲ ಆಧ್ಯತೆ ನೀಡಿ ಸಾಮಾನ್ಯ ವರ್ಗದವರಿಗೂ ಸಹಿತ ಶೇ. 90 ಪ್ರತಿಶತದಲ್ಲಿ ಸಹಾಯಧನ ನೀಡಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಫಲಾನುಭವಿಗಳಿಗೆ ಮೊದಲ 2ಹೆ ಪ್ರದೇಶಕ್ಕೆ ಶೇ. 90 ಹಾಗೂ ಉಳಿದ 3ಹೆ ಪ್ರದೇಶಕ್ಕೆ ಭಾರತ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸಹಾಯಧನ ವಿತರಿಸಬಹುದಾಗಿದೆ. ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಾಲ್ಲೂಕಾ ತೋಟಗಾರಿಕೆ ಕಚೇರಿಗಳಿಂದ ಅರ್ಜಿಗಳನ್ನು ಪಡೆದುಕೊಂಡು ಹೆಸರನ್ನು ನೊಂದಾಯಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!