ದಿವಂಗತ ಸುರೇಶ ಅಂಗಡಿ ಮನೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹೌದು ಬೆಳಗಾವಿಯಲ್ಲಿ ಆಯೋಜಿಸಿದ್ದ ಜನಸೇವಕ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಸುರೇಶ ಅಂಗಡಿ ಅವರ ಮನೆಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದರು. ಈ ವೇಳೆ ದಿ.ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅಮಿತ್ ಶಾಗೆ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣಸಿಂಗ್ ರಾಜ್ಯದ ಸಚಿವ ಜಗದೀಶ ಶೆಟ್ಟರ್, ಶಾಸಕ ಅನಿಲ ಬೆನಕೆ ಸೇರಿ ಹಲವು ಮುಖಂಡರು ಸಾಥ್ ನೀಡಿದರು.