State

ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ: ಯಡಿಯೂರಪ್ಪ ಟೀಕೆಗೆ ಸಿದ್ದರಾಮಯ್ಯ ತಿರುಗೇಟು

Share

ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಆದರೆ ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳ್ತಿದ್ದಾರೆ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಯಾಕೋ ಅವರು ಮರೆತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗಳ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಒಂದು ಕಡೆ ವಿಶ್ವಮಾನವರಾಗಿ ಅಂತಾನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕøತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು ಎಂದು ಹೇಳಿದ್ದಾರೆ.
ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾμÉಯಾಗಿದೆ.

ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಅಂತಾ ಅರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ರೈತರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags:

error: Content is protected !!