State

ದೆಹಲಿ ತಲುಪಿದ ಸಿಎಂ ಬಿಎಸ್‍ವೈ..ಮಧ್ಯಾಹ್ನ ಅಮಿತ್ ಷಾ ಭೇಟಿ..ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್..?

Share

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲು ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅತ್ತ ಸಿಎಂ ದೆಹಲಿಗೆ ಹೋಗುತ್ತಿದ್ದಂತೆ ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಸಂಚಲನ ಶುರುವಾಗಿದೆ.

ಹೌದು ಕೇಂದ್ರ ಸಚಿವ ಅಮಿತ್ ಷಾ ದೆಹಲಿಗೆ ಬರುವಂತೆ ಸೂಚನೆ ನೀಡುತ್ತಿದ್ದಂತೆ ಇಂದು ಬೆಳಿಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಸಿಎಂ ಬಿಎಸ್‍ವೈಗೆ ಪುತ್ರ ಬಿ.ವೈ.ವಿಜಯೇಂದ್ರ ಕೂಡ ಸಾಥ್ ನೀಡಿದ್ದಾರೆ. ಬೆಂಗಳೂರಿನ ಕೇಂಪೇಗೌಡ ಏರ್‍ಫೋರ್ಟ್‍ನಿಂದ ವಿಮಾನದಲ್ಲಿ ದೆಹಲಿಗೆ ತೆರಳಿದ ಸಿಎಂ ಬಿಎಸ್‍ವೈ ನೇರವಾಗಿ ದೆಹಲಿಯ ಕರ್ನಾಟಕ ಭವನಕ್ಕೆ ತೆರಳಿದರು. ಬಳಿಕ ಮಧ್ಯಾಹ್ನ ಅಷ್ಟೊತ್ತಿಗೆ ಕೇಂದ್ರ ಸಚಿವ ಅಮಿತ್ ಷಾರನ್ನು ಭೇಟಿಯಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ದೆಹಲಿಗೆ ಹೋಗುವುದಕ್ಕೂ ಮೊದಲು ಕೇಂಪೇಗೌಡ ಏರ್‍ಫೋರ್ಟ್‍ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್‍ವೈ ಸಂಪುಟ ವಿಸ್ತರಣೆಯೂ ಸೇರಿದಂತೆ ಹಲವು ವಿಷಯಗಳ ಕುರಿತು ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇನೆ. ಅದೇ ರೀತಿ ಬೆಳಗಾವಿ ಲೋಕಸಭೆ ಬೈಎಲೆಕ್ಷನ್ ಮತ್ತು ವಿಧಾನಸಭೆಯಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಒಂದಷ್ಟು ಚರ್ಚೆ ಮಾಡುವುದು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಡೆದ ಗೆಲುವಿನ ಬಗ್ಗೆ ಮಾಹಿತಿ ನೀಡುವಂಥದ್ದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷದ ಹಿರಿಯ ನಾಯಕರ ಜೊತೆ ಚರ್ಚಿಸಿ, ರಾತ್ರಿ ವಾಪಾಸು ಬರಲು ಹೋಗುತ್ತಿದ್ದೇನೆ ಎಂದರು.

ಇದೇ ವೇಳೆ ಸಂಪುಟ ವಿಸ್ತರಣೆ ಈ ವಾರ ಆಗುತ್ತದೆಯೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೊತ್ತಿಲ್ಲಪ್ಪ. ನಾನು ಎಲ್ಲ ವಿಷಯವನ್ನು ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದಷ್ಟೇ ಹೇಳಿದರು.
ಒಟ್ಟಾರೆ ಹಲವು ನಿರೀಕ್ಷೆಗಳೊಂದಿಗೆ ದೆಹಲಿಗೆ ಹೋಗಿರುವ ಸಿಎಂ ಬಿಎಸ್‍ವೈಗೆ ಬಿಜೆಪಿ ಹೈಕಮಾಂಡ್ ಅಭಯ ಹಸ್ತ ನೀಡುತ್ತಾ ಅಥವಾ ಮತ್ತೆ ಹಿಂದಿನಂತೆ ಬರಿ ಗೈಯಲ್ಲಿ ವಾಪಸ್ಸು ಆಗುತ್ತಾರಾ ಎಂಬುದನ್ನು ಕಾಯ್ದು ನೋಡಬೇಕಿದೆ.

 

Tags:

error: Content is protected !!