ಕೊಪ್ಪಳ ಜಿಲ್ಲೆಯ ಭಾನಾಪುರ ಗ್ರಾಮದಲ್ಲಿ ಆಟಿಕೆಗಳ ಕ್ಲಸ್ಟರ್ ನಿರ್ಮಾಣಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.
ಶನಿವಾರ ಕೊಪ್ಪಳದ ಭಾನಾಪುರ ಗ್ರಾಮದ ಬಳಿ ದೇಶದ ಮೊದಲ ಆಟಿಕೆ ಕ್ಲಸ್ಟರ್ ನಿರ್ಮಾಣಕ್ಕೆ ಸಿಎಂ ಬಿಎಸ್‍ವೈ ಶಂಕು ಸ್ಥಾಪನೆ ನೆರವೇರಿಸಿದರು. ಸುಮಾರು ಐದು ಸಾವಿರ ಕೋಟಿ ರೂಪಾಯಿ ಯೋಜನೆಯಲ್ಲಿ 400 ಎಕರೆ ಪ್ರದೇಶದಲ್ಲಿ ತಯಾರಾಗುತ್ತಿರುವ ಆಟಿಕೆ ಕ್ಲಸ್ಟರ್‍ನ್ನು ಏಕಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಸುಮಾರು 25 ಸಾವಿರ ಜನರಿಗೆ ಇದರಿಂದ ಉದ್ಯೋಗ ಸಿಗಲಿದೆ.
ಇದೇ ವೇಳೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಮುಖ್ಯಮಂತ್ರಿಗಳು ಚಾಲನೆ ನೀಡಿದರು.