ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಮಂಗಳಮುಖಿ ಸುಧಾ ಜೋಗತಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಭಿನಂದಿಸಿ, ಅವರ ಯಶಸ್ಸು, ಪರಿಶ್ರಮವನ್ನು ಶ್ಲಾಘಿಸಿದರು.
ಹೊಸಪೇಟೆಯ ಖಾಸಗಿ ಹೋಟೆಲ್‍ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಮಂಗಳಮುಖಿ ಸುಧಾ ಜೋಗತಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಭಿನಂದಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಮಂಗಳಮುಖಿಯರು ಸಮಾಜದಲ್ಲಿ ನೊಂದು ಬೆಂದವರು. ಆದರೆ ಇದೆಲ್ಲವನ್ನು ಮೆಟ್ಟಿನಿಂತ ಮಂಗಳಮುಖಿ ಸುಧಾ ಜೋಗತಿ, ಗ್ರಾಮೀಣ ಭಾಗದ ಏಳಿಗೆಗೆ ಮುಂದಾಗಿದ್ದಾರೆ. ಸುಧಾ ಅವರಲ್ಲಿರುವ ಸಾಧಿಸುವ ಛಲ, ಸೇವಾ ಮನೋಭಾವನೆ ಇವೆಲ್ಲವನ್ನೂ ಕಂಡ ಮತದಾರರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವರಿಗೆ ಆಶೀರ್ವದಿಸಿದ್ದಾರೆ. ಮಂಗಳಮುಖಿಯರ ಏಳಿಗೆಗಾಗಿ ನಮ್ಮ ಸರ್ಕಾರ ಕೂಡ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಧ್ಯೇಯವಾಗಿದೆ ಎಂದರು.
ಈ ವೇಳೆ ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.