Belagavi

ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ

Share

ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು.

2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಗಳಗನಾಥ ಮತ್ತು ನಾ.ಶ್ರೀ.ರಾಜಪುರೋಹಿತ ಪ್ರತಿಷ್ಠಾನದಿಂದ ಈ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ದುಷ್ಯಂತ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿದ ಬೆಳಗಾವಿ ರಂಗಸಂಪದದ ಅಧ್ಯಕ್ಷ ಡಾ.ಅರವಿಂದ ಕುಲಕರ್ಣಿ ಮಾತನಾಡಿ, ಕಾವ್ಯ, ಕಥೆ, ಕಾದಂಬರಿ, ನಾಟಕ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿರುವ ಗಳಗನಾಥರು ನಾಡು ಕಂಡ ಅಪ್ರತಿಮ ಬರಹಗಾರರಾಗಿದ್ದರು. ಕಾದಂಬರಿ ಪಿತಾಮಹ ಎಂತಲೇ ಅವರನ್ನು ಕರೆಯಬಹುದು. ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಪರಂಪರೆ ಹುಟ್ಟು ಹಾಕಿರುವುದು ಸ್ತುತ್ಯವಾದ ಕಾರ್ಯವಾಗಿದೆ ಎಂದರು.

ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ರಾಮಚಂದ್ರೇಗೌಡ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

ಈ ವೇಳೆ ಕುಲಪತಿ ಪ್ರೊ. ಎಂ.ರಾಮಚಂದ್ರೇಗೌಡ ಮಾತನಾಡಿ, ಕನ್ನಡ ನಾಡು, ನುಡಿ ಶ್ರೀಮಂತಗೊಳಿಸಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು.

ಹಿರಿಯ ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಪ್ರಾಧ್ಯಾಪಕಿ ಮೇತ್ರಿಯಿಣಿ ಗದಿಗೆಪ್ಪಗೌಡರ, ಪ್ರಾಧ್ಯಾಪಕ ಎಸ್.ಎಂ.ಗಂಗಾಧರಯ್ಯ, ಶಶಿಕಲಾ ಹುಡೇದ,ವೆಂಕಟೇಶ ಗಳಗನಾಥ, ಜಿಲ್ಲೆಯ ಸಾಹಿತಿಗಳು, ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

 

Tags:

error: Content is protected !!