Belagavi

ನಾಳೆ ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ

Share

2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5ರಂದು ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಗಳಗನಾಥ ಮತ್ತು ನಾ.ಶ್ರೀ.ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ದುಷ್ಯಂತ ನಾಡಗೌಡ ತಿಳಿಸಿದರು.

ಬೆಳಗಾವಿಯ ವಾರ್ತಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಗಳಗನಾಥ ಮತ್ತು ನಾ.ಶ್ರೀ.ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ದುಷ್ಯಂತ ನಾಡಗೌಡ ಸೋಮವಾರ ಮಾತನಾಡಿ, 2015ರ ಸೆಪ್ಟೆಂಬರ್ 22ರಂದು ಅಸ್ತಿತ್ವಕ್ಕೆ ಬಂದ ಗಳಗನಾಥ ಮತ್ತು ನಾ.ಶ್ರೀ.ರಾಜಪುರೋಹಿತ ಪ್ರತಿಷ್ಠಾನ ಪ್ರಶಸ್ತಿ ಪ್ರದಾನವಲ್ಲದೇ, ವಿದ್ವತ್‍ಪೂರ್ಣ ವಿಚಾರ ಸಂಕಿರಣ ಕಾರ್ಯಕ್ರಮ ನಡೆಸಿದೆ, ಆಯ್ದ ಮಹತ್ವದ ಕೆಲವು ಕೃತಿಗಳನ್ನು ಪುನರ್ ಪ್ರಕಟಿಸಿದೆ.

ಈಗ 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5ರಂದು ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ನಡೆಯಲಿದೆ. ಬೆಳಗಾವಿ ರಂಗಸಂಪದದ ಅಧ್ಯಕ್ಷ ಡಾ.ಅರವಿಂದ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ರಾಮಚಂದ್ರೇಗೌಡ ಪ್ರಶಸ್ತಿ ಪ್ರದಾನ ಮಾಡುವರು.

ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿರಿಯ ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಪ್ರೊ. ದುಷ್ಯಂತ ನಾಡಗೌಡ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಒಟ್ಟಿನಲ್ಲಿ 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5ರಂದು ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ದುಷ್ಯಂತ ನಾಡಗೌಡ ತಿಳಿಸಿದರು.

Tags:

error: Content is protected !!