State

ನಾಳೆ ಸಂಜೆ ನೂತನ ಸಚಿವರು ಪ್ರಮಾಣ ವಚನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Share

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಬುಧವಾರ ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮಾತನಾಡಿ, ಇಂದು ಸಂಜೆಯೊಳಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು. ನೂತನವಾಗಿ ಸಂಪುಟ ಸೇರುವ ಸಚಿವರ ಪಟ್ಟಿಯನ್ನು ನಾಳೆಯೇ ಬಿಡುಗಡೆಗೊಳಿಸಲಾಗುವುದು. ಯಾವುದೇ ಸಚಿವರನ್ನು ಕೈಬಿಡುವ ಬಗ್ಗೆಯೂ ಸಂಜೆಯೊಳಗೆ ತಿಳಿಸುತ್ತೇನೆ ಎಂದು ತಿಳಿಸಿದರು.

ಈಗಾಗಲೇ ಯಡಿಯೂರಪ್ಪ 6 ಸಚಿವರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಒಂದು ಸ್ಥಾನದ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.

Tags:

error: Content is protected !!