Nippani

ನಾಳೆ ಹುನ್ನರಗಿಯ ಸ್ಮಶಾನದಲ್ಲಿ ಸತೀಶ ಜಾರಕಿಹೊಳಿಯಿಂದ ಮಗುವಿಗೆ ನಾಮಕರಣ

Share

ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತ ಬಾಳು ಬರಗಾಲೆ ಅವರ ಮೊಮ್ಮಗನ ನಾಮಕರಣ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ತಿಳಿಸಿದ್ದಾರೆ.

ನಿಪ್ಪಾಣಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣರಾವ್ ಚಿಂಗಳೆ ಅವರು ಈ ಕಾರ್ಯಕ್ರಮಕ್ಕೆ ಮಾನವ ಬಂಧುತ್ವ ವೇದಿಕೆಯ ರಾಜ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಆಗಮಿಸುತ್ತಿದ್ದು. ಗ್ರಾಮದ ಸ್ಮಶಾನ ಭೂಮಿಯಲ್ಲಿ ನಡೆಯಲಿರುವ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಾಜದಲ್ಲಿ ಇರುವ ಮೂಢನಂಬಿಕೆ ಹೋಗಲಾಡಿಸುವ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸಿದ್ದು. ಇದೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಸ್ಮಶಾನದಲ್ಲಿ ಮಗುವಿಗೆ ನಾಮಕರಣ ಮಾಡುವ ಕಾರ್ಯಕ್ರಮ ನಡೆಯಲಿದೆ. ಮೂಢನಂಬಿಕೆ ಹೋಗಲಾಡಿಸುವ ಕಾರ್ಯದಲ್ಲಿ ಹೊಸ ಇತಿಹಾಸ ನಿರ್ಮಾಣ ಆಗಲಿದೆ ಎಂದು ತಿಳಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ, ಸುಭಾಷ ಜೋಷಿ, ಯುವ ಧುರೀಣ ಉತ್ತಮ ಪಾಟೀಲ ಸೇರಿದಂತೆ ಮಾನವ ಬಂಧುತ್ವ ವೇದಿಕೆಯ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

 

Tags:

error: Content is protected !!