ಇಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ನಾಡಿನಾಧ್ಯಂತ ಆಚರಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೂಡ ಅಂಬಿಗರ ಚೌಡಯ್ಯನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿಯ ಕಟ್ಟಿಮನಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಶರಣ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಉತ್ಸವ-2021ಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಬಸವರಾಜ ಸುಣಗಾರ, ರಮೇಶ ಗಸ್ತಿ, ಎಸ್. ಗಸ್ತಿ, ಮಧುಶ್ರೀ ಪೂಜಾರಿ, ರವಿಶಂಕರ ಚನ್ನಾಳ, ಘೂಳಪ್ಪ ವಿಜಯನಗರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.