ನಿಪ್ಪಾಣಿ ನಗರದ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಹಾಗೂ ವಸತಿ ಗೃಹಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು .
ಸುಮಾರು 8 ಕೋಟಿ ಮೌಲ್ಯದ ಈ ಆಸ್ಪತ್ರೆಯಾಗಿದ್ದು ನಿಪ್ಪಾಣಿ ನಗರದ ಜನರ ಅನಕೂಲಕ್ಕಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ತೆರೆಯಲಾಗಿದ್ದು ಉದ್ಘಾಟನೆಗೆ ಆಗಮಿಸಿದ ಸಚಿವ ಕೆ ಸುಧಾಕರ ಅವರಿಗೆ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಮುಖ್ಯ ಸಂಚೇತಕ ಮಹಾಂತೇಶ ಕವಟಗಿಮಠ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಬ ಜೊಲ್ಲೆ ಸಾಥ್ ನೀಡಿದರು.