Bagalkot

ಪಂಚಮಸಾಲಿ ಸ್ವಾಮೀಜಿ ಹೋರಾಟ ಮಠದ ಉದ್ಧಾರಕ್ಕಾಗಿ ಅಲ್ಲ..ಸಮುದಾಯದ ಉದ್ಧಾರಕ್ಕಾಗಿ..ಯತ್ನಾಳ್

Share

ಕೂಡಲಸಂಗಮದ ಜಗದ್ಗುರುಗಳು ಮಠದ ಉದ್ಧಾರಕ್ಕಾಗಿ ಹೋರಾಟ ಮಾಡುತ್ತಿಲ್ಲ. ಪಂಚಮಸಾಲಿ ಸಮುದಾಯದ ಅಭಿವೃದ್ಧಿಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮಾಜವನ್ನು 2ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಜ.14ರಿಂದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿರುವ ಹಿನ್ನೆಲೆ ಶನಿವಾರ ಕೂಡಲಸಂಗಮದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಸಚಿವರಾದ ಸಿ.ಸಿ.ಪಾಟೀಲ್, ಸಂಸದ ಸಂಗಣ್ಣ ಕರಡಿ ಅವರು ಸಿಎಂ ಜೊತೆ ಚರ್ಚಿಸಿ ನಮ್ಮ ಬಹು ದಿನಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಾರೆ. ನಮ್ಮ ಪಾತ್ರ ಈಗ ಏನೂ ಇಲ್ಲ. ಜನವರಿ 14ರ ನಂತರ ನಮ್ಮ ಪಾತ್ರ ಶುರುವಾಗುತ್ತದೆ ಎಂದು ಮಾರ್ಮಿಕವಾಗಿ ಮಾತನಾಡಿದರು. ಇನ್ನು ನಮ್ಮ ಪಂಚಮಸಾಲಿ ಜಗದ್ಗುರುಗಳು ಮಠದ ಉದ್ಧಾರಕ್ಕಾಗಿ ಹೋರಾಟ ಮಾಡುತ್ತಿಲ್ಲ. ಸಮುದಾಯದ ಅಭಿವೃದ್ಧಿಗೋಸ್ಕರ ಹೋರಾಟ ಮಾಡುತ್ತಿದ್ದು, ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

ಸಭೆಯಲ್ಲಿ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಚಿವ ಸಿ.ಸಿ.ಪಾಟೀಲ್, ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!