ಪಾಕಿಸ್ತಾನದ ಪರ ಘೋಷಣೆ ಕೂಗಿದ ನೈಜ ಆರೋಪಿಗಳನ್ನು ಬಂಧಿಸಿ ಅಮಾಯಕರನ್ನು ಬಿಡುಗಡೆಗೊಳಿಸಿ ಕೇಸ್ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು ಕಳೆದ ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಪಲಿತಾಂಶ ದಿನದಂದು ಪಾಕಿಸ್ತಾನದ ಪರ ಘೋಷಣೆಯನ್ನು ಕೂಗಲಾಗಿದೆ ಎಂದು. ಪೊಲೀಸರು 3 ಮಂದಿ ಅಮಾಯಕರನ್ನು ಬಂಧಿಸಿ ದೇಶದ್ರೋಹದ ಕೇಸನ್ನು ಹಾಕುತ್ತಾರೆ .
ಮಾತ್ರವಲ್ಲ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿ ಅಮಾಯಕರನ್ನು ಬಂಧಿಸುತ್ತಾರೆ ಎಂದು ಆರೋಪಿಸಿದರು. ಎಸ್.ಡಿ.ಪಿ.ಐ ಪಕ್ಷದ ಕಾರ್ಯಕರ್ತರು ತಮ್ಮ ಘೋಷಣೆಗಳಲ್ಲಿ ಪಕ್ಷದ ಪರ ಘೋಷಣೆಗಳನ್ನು ಕೂಗಿದ್ದರೇ ಹೊರತು ಬೇರೆ ಯಾವ ಘೋಷಣೆಯನ್ನು ಕೂಗಿಲ್ಲ ಎಂಬುದನ್ನು ದಾಖಲೆ ಸಮೇತ ನೀಡಿದ್ದರೂ ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ಪೊಲೀಸರು ಅದಾವುದನ್ನೂ ಪರಿಗಣಿಸಲಿಲ್ಲ . ಆದರೆ ಇದೀಗ ಬಿಜೆಪಿಗರೇ ಪಾಕಿಸ್ತಾನದ ಪರ ಘೋಷಣೆ ಕೂಗುವ ವಿಡಿಯೋ ವೈರಲ್ ಆಗುತ್ತಿದ್ದು ನಿಜಬಣ್ಣ ಬಯಲಾಗುತ್ತಿದೆ ಎಂದು ಆರೋಪಿಸಿದರು.
ಆದ್ದರಿಂದ ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕು , ಅಮಾಯಕ ನಿರಪರಾಧಿಗಳನ್ನು ಬಿಡುಗಡೆಗೊಳಿಸಿ ಪೊಲೀಸ್ ಇಲಾಖೆ ಪರಿಹಾರ ನೀಡಬೇಕು ಮತ್ತು ಕೂಡಲೇ ಕೇಸ್ ವಾಪಸ್ ಪಡೆಯಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಒತ್ತಾಯಿ ಪ್ರತಿಭಟನೆ ನಡೆಸಿದರು.