ದಿನದಿಂದ ದಿನಕ್ಕೆ ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಹೀಗಾಗಿ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕನಿಷ್ಠ 20 ರೂಪಾಯಿ ಕಡಿಮೆ ಮಾಡುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿದರು.
ಶನಿವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ನ್ಯಾಯವಾದಿಗಳು ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಪ್ರತಿದಿನ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಾಗುತ್ತಿದೆ. ಇದರಿಂದ ಎಲ್ಲಾ ಕ್ಷೇತ್ರಗಳ ಮೇಲೂ ಭಾರಿ ಹೊಡೆತ ಬೀಳುತ್ತಿದೆ. ಹೀಗಾಗಿ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್-ಡಿಸೇಲ್ ಬೆಲೆ ಕಡಿಮೆ ಮಾಡಿ ದೇಶದ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿ ಆಗ್ರಹಿಸಿದರು.
ಈ ವೇಳೆ ನ್ಯಾಯವಾದಿ ಅಣ್ಣಾಸಾಹೇಬ ಘೋರ್ಪಡೆ ಮಾತನಾಡಿ ನಾವು ಆಡಳಿತಕ್ಕೆ ಬಂದರೆ ದೇಶದಲ್ಲಿ ಅಚ್ಛೇ ದಿನ್ ಬರುತ್ತದೆ ಎಂದು ಹೇಳಿದ್ದ ಪ್ರಧಾನಿ ಮೋದಿ ಇಂದು ಕೆಟ್ಟ ದಿನಗಳನ್ನು ದೇಶದ ಜನತೆಗೆ ಕರುಣಿಸಿದ್ದಾರೆ. ಆದ್ದರಿಂದ ಕನಿಷ್ಠ 20 ರೂಪಾಯಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹಲವು ನ್ಯಾಯವಾದಿಗಳು ಉಪಸ್ಥಿತರಿದ್ದರು.