Belagavi

ಫೆ.7-8ರಂದು ಮಹರ್ಷಿ ವಾಲ್ಮೀಕಿ ಜಾತ್ರೆ ಹಿನ್ನೆಲೆ ಪೂರ್ವಭಾವಿ ಸಭೆ

Share

ಫೆಬ್ರವರಿ 7 ಮತ್ತು 8ರಂದು ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆ ಹಿನ್ನೆಲೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಹೌದು ಸೋಮವಾರ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಭೂಮಿ ಪೂಜೆಯನ್ನು ಪ್ರಸನ್ನಾನಂದಪುರಿ ಸ್ವಾಮೀಜಿ ನೆರವೇರಿಸಿದರು.

ಈ ವೇಳೆ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಸಮಾಜದ ಶಾಸಕರು, ಇತರೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ನಂತರ ನಡೆದ ಪೂರ್ವಭಾವಿ ಸಭೆಯಲ್ಲಿ ಜಾತ್ರೆ ಯಶಸ್ಸಿಗಾಗಿ ಚರ್ಚಿಸಲಾಯಿತು. ಪ್ರಮುಖವಾಗಿ ಎಸ್‍ಟಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

 

Tags:

error: Content is protected !!