State

ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

Share

ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಭೂಮಿ ಪೂಜೆ ನೆರವೇರಿಸಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಬಸವತತ್ವದ ವಿಧಿವಿಧಾನದಂತೆ ಕಾರ್ಯಕ್ರಮ ಜರುಗಿತು.

ಈ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಅನುಭವ ಮಂಟಪದ ಮೂಲಕ ದೇಶದ ಮೊಟ್ಟಮೊದಲ ಸಂಸತ್ತನ್ನು ಅಸ್ತಿತ್ವಕ್ಕೆ ತಂದಿದ್ದ ಮಹಾತ್ಮ ಬಸವಣ್ಣನವರು ನಾಡಿಗೆ ನೀಡಿದ ಕೊಡುಗೆ ದೊಡ್ಡದು. ಪ್ರಜಾಪ್ರಭುತ್ವದ ಮೂಲ ಬೇರುಗಳನ್ನು ಅನುಭವ ಮಂಟಪದಲ್ಲಿ ಕಾಣಬಹುದಾಗಿತ್ತು.600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪ ಎರಡು ವರ್ಷದಲ್ಲಿ ನಿರ್ಮಾಣವಾಗಲಿದೆ. ಯಾವುದೇ ಸಮಸ್ಯೆ ಆಗದಂತೆ ಅನುಭವ ಮಂಟಪ ನಿರ್ಮಾಣ ಕಾರ್ಯ ನೆರವೇರಲಿದೆ ಎಂದರು.

ಸಚಿವರು, ಶಾಸಕರು, ಅಧಿಕಾರಿಗಳು, ಬೀದರ್ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಲಿಂಗಾಯತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

 

Tags:

error: Content is protected !!