Belagavi

ಬಿಜೆಪಿ ಜನಸೇವಕ ಸಮಾವೇಶಕ್ಕೆ ಭರದ ಸಿದ್ಧತೆ..ಜಿಲ್ಲಾ ಕ್ರೀಡಾಂಗಣಕ್ಕೆ ರಮೇಶ ಜಾರಕಿಹೊಳಿ ಭೇಟಿ, ಪರಿಶೀಲನೆ

Share

ಜ.17ರಂದು ಬೆಳಗಾವಿಯಲ್ಲಿ ಬಿಜೆಪಿ ಜನಸೇವಕ ಸಮಾವೇಶಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಅದರಲ್ಲಿಯೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮುತುವರ್ಜಿ ವಹಿಸಿ ಸಿದ್ಧತೆಯನ್ನು ಪರಿಶೀಲಿಸುತ್ತಿದ್ದಾರೆ.

ಹೌದು ರಾಜ್ಯಾಧ್ಯಂತ ಬಿಜೆಪಿ ಪಕ್ಷದ ಜನಸೇವಕ ಸಮಾವೇಶ ನಡೆಯುತ್ತಿದೆ. ಈ ಜನಸೇವಕ ಸಮಾವೇಶದ ಸಮಾರೋಪ ಸಮಾವೇಶ ಜ.17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಬುಧವಾರ ಜಿಲ್ಲಾಕ್ರೀಡಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ನಾಯಕರೊಂದಿಗೆ ಭೇಟಿ ನೀಡಿ ಪೆಂಡಾಲ್ ತಯಾರಿಯನ್ನು ಪರಿಶೀಲನೆ ನಡೆಸಿದರು.


ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ ಜಾರಕಿಹೊಳಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿದ್ದಾರೆ. ಸಮಾರಂಭಕ್ಕೆ 3ರಿಂದ 4 ಲಕ್ಷ ಜನರನ್ನು ಸೇರಿಸುವ ದೃಢ ಸಂಕಲ್ಪ ಮಾಡಿದ್ದೇವೆ. ನಮ್ಮ ಪಕ್ಷದ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರುಉ ಸೇರಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದೇವೆ. ಸಿಎಂ ಯಡಿಯೂರಪ್ಪ ಸೇರಿದಂತೆ ಸಂಪುಟದ ಎಲ್ಲಾ ಸಚಿವರು, ಮುಖಂಡರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಯಿಸಿದ ರಮೇಶ ಜಾರಕಿಹೊಳಿ ಹಳೆ ಪಕ್ಷಕ್ಕಿಂತ ಇದರಲ್ಲಿ ಬಾಳ ಈಜಿಯಾಗಿ ಹೋಗುತ್ತಿದೆ. ಅಲ್ಲಿ ಫ್ಯೂನ್ ಕೆಲಸದಿಂದ ಹಿಡಿದು ಎಲ್ಲಾ ಕೆಲಸ ನಾವೇ ಮಾಡಬೇಕಿತ್ತು. ಆದ್ರೆ ಇಲ್ಲಿ ಕಾರ್ಯಕರ್ತರೇ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬಹಳ ಖುಷಿಯಾಗುತ್ತಿದೆ ಎಂದು ಹೇಳಿದರು.
: ಈ ವೇಳೆ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಮಂಡಳ ಅಧ್ಯಕ್ಷ ಧನಂಜಯ ಜಾಧವ್, ಮುಖಂಡರಾದ ಮುರುಘೇಂದ್ರಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Tags:

error: Content is protected !!